
ಬೆಳಗಾವಿ
ರಾಜ್ಯ ಉಪಚುನಾವಣೆಯಲ್ಲಿ ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ ಗೆಲುವಿಗೆ ಉಸ್ತುವಾರಿ ವಹಿಸಿಕೊಂಡಿದ್ದ ಮಾಸ್ಟರ್ ಮೈಂಡ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ರಣತಂತ್ರ ಯಶಸ್ವಿಯಾಗಿದ್ದು, ಬಿಜೆಪಿ ಭದ್ರಕೋಟೆಯನ್ನು ಸತೀಶ್ ಜಾರಕಿಹೊಳಿ ಬೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯ ಗೋಕಾಕ ಮನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೌರವಿ ಸನ್ಮಾನಿಸಿದರು. ಉಪಚುನಾವಣೆ ಘೋಷಣೆಯಾದಾಗಿನಿಂದಲೂ ಶಿಗ್ಗಾಂವಿಯಲ್ಲಿ ಠಿಕಾಣಿ ಹೂಡಿದ್ದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿಯ ತಂತ್ರಕ್ಕೆ ರಣತಂತ್ರ ರೂಪಿಸಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ ಗೆಲುವಿಗೆ ಚಕ್ರ ವ್ಯೂಹ ರಚಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಪಡೆಯೊಂದಿಗೆ ಮಾನವ ಬಂಧುತ್ವ ವೇದಿಕೆಯವರು ಸಚಿವ ಸತೀಶ್ ಗೆ ಸಾಥ್ ನೀಡಿದ್ದು ಶಿಗ್ಗಾಂವಿ ಗೆಲುವಿಗೆ ಕಾರವಾಗಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.
