Monday, November 23, 2026
HomeKoppalಕರ್ಕೀಹಳ್ಳಿ ಗ್ರಾಮದಲ್ಲಿ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ : ಬಾಲ್ಯವಿವಾಹದಿಂದ ಮಕ್ಕಳ ಹಕ್ಕುಗಳಿಗೆ ಧಕ್ಕೆ

ಕರ್ಕೀಹಳ್ಳಿ ಗ್ರಾಮದಲ್ಲಿ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ : ಬಾಲ್ಯವಿವಾಹದಿಂದ ಮಕ್ಕಳ ಹಕ್ಕುಗಳಿಗೆ ಧಕ್ಕೆ

ಕನ್ನಡಮ್ಮ ಸುದ್ದಿ-ಕೊಪ್ಪಳ :  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸ್ಪಂದನ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಕರ್ಕೀಹಳ್ಳಿ ಗ್ರಾಮದಲ್ಲಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಬುಧವಾರ “ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿಗಳಾದ ಮಾಂತೇಶ್ ಎಸ್ ದರಗದ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳಿಗೆ 18 ವರ್ಷ ತುಂಬವ ಪೂರ್ವದಲ್ಲಿ ಮದುವೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಬಾಲ್ಯವಿವಾಹದಿಂದ ಮಕ್ಕಳ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತದೆ.  ಓದುವ ಮತ್ತು ಆಟ ಆಡುವ ವಯಸ್ಸಿನಲ್ಲಿ ಮಕ್ಕಳು ಬಾಲ್ಯವಿವಾಹದಿಂದ ಜವಾಬ್ದಾರಿ ಅನುಭವಿಸಬೇಕಾಗುತ್ತದೆ ಎಂದರು.  ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಕುಸುಮ ಕುಮಾರಿ, ವಸತಿ ಶಾಲೆಯ ಶಿಕ್ಷಕಿ ಶೈಲಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರವಿ ಹಾಗೂ ಪ್ರತಿಭಾ ಸೇರಿದಂತೆ ಸ್ಪಂದನ ಸಂಸ್ಥೆಯ ಪ್ರತಿನಿಧಿಗಳು, ವಸತಿ ಶಾಲೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Total Views 22
RELATED ARTICLES

Most Popular

Recent Comments

KNN City News
Home
E-Paper