
ಬೆಂಗಳೂರು
ಶಿಕ್ಷಣ ಸಚಿವ ಮಧು ಬಂಗಾರಪ್ಪ ರವರನ್ನು ಭೇಟಿಯಾದ ಬಿಸಿಯೂಟ ಒಕ್ಕೂಟ ಬೆಂಗಳೂರು ಕರ್ನಾಟಕ ರಾಜ್ಯ ಬಿಸಿಯೂಟ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟದಿಂದ ಶಾಲಾ ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.
ಕರ್ನಾಟಕ ರಾಜ್ಯದಲ್ಲಿ ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆ ಮತ್ತು ಪೂರಕ ಪೌಷ್ಟಿಕ ಆಹಾರ ವನ್ನು ಒಂದರಿಂದ 10ನೇ ತರಗತಿ ಮಕ್ಕಳಿಗೆ ಆಹಾರ ತಯಾರಿಸಿ ಶಾಲಾ ಮಕ್ಕಳಿಗೆ ಸರಬರಾಜು ಮಾಡುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಒಕ್ಕೂಟದ ಅಧ್ಯಕ್ಷರ ಮಾರ್ಗದರ್ಶನದಲ್ಲಿ ಈ ದಿನ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ರವರನ್ನು ಅವರ ಮನೆಯ ಕಚೇರಿಯಲ್ಲಿ ಭೇಟಿ ಮಾಡಿ ಒಕ್ಕೂಟಕ್ಕೆ ಸಹಕಾರವನ್ನು ನೀಡಲು ಮನವಿ ಮಾಡಿಕೊಳ್ಳಲಾಯಿತು ಶಿಕ್ಷಣ ಸಚಿವರು ಮನವಿ ಪತ್ರವನ್ನು ಸ್ವೀಕರಿಸಿ ಸ್ವಯಂಸೇವಾ ಸಂಸ್ಥೆಗಳ ಜೊತೆಗೆ ಬಹಳ ಸ್ಪಂದನೆಯಿಂದ ಸಹಕಾರ ನೀಡುವುದರ ಕುರಿತು ಚರ್ಚೆ ಮಾಡಿ ಸ್ವಯಂ ಸೇವಾ ಸಂಸ್ಥೆಗಳ ಜೊತೆ ಒಂದು ಸಭೆಯನ್ನು ಆಯೋಜನೆ ಮಾಡಿ ಎಲ್ಲಾ ಕುಂದು ಕೊರತೆಗಳನ್ನು ಪರಿಹರಿಸಲಾಗುವುದೆಂದು ಬರವಸೆಯನ್ನು ನೀಡಿದರು ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯದರ್ಶಿಗಳಾದ ಕೆ ಭೀಮರವರು ಖಜಾಂಚಿಗಳಾದ ಕಲ್ಲಪ್ಪ ಬೋರಣ್ಣನವರು ತಮ್ಮ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟಕ್ಕೆ ಸರ್ಕಾರದ ಸಹಕಾರ ಹಾಗೂ ಸ್ಪಂದನೆಯನ್ನು ನೀಡಲು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರುಗಳಾದ ರವೀಂದ್ರ ಕುಮಾರ್, ಮಂಜುನಾಥ್ ಅಳವಣಿ, ನಾಗೇಂದ್ರ ಸುಬ್ಬರಾಜು , ಸಲ್ಮಾನ್ ಹಾಗೂ ಪ್ರವೀಣ್ ಉಪಸ್ಥಿತರಿದ್ದರು.
