Monday, November 23, 2026
HomeKoppalಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ, ಬಾನಾಪುರ  ಮಹಾತ್ಮ ಗಾಂಧಿ , ಮುನಿರಾಬಾದಗೆ ಹುಲಿಗೆಮ್ಮ ದೇವಿ ಹೆಸರು

ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ, ಬಾನಾಪುರ  ಮಹಾತ್ಮ ಗಾಂಧಿ , ಮುನಿರಾಬಾದಗೆ ಹುಲಿಗೆಮ್ಮ ದೇವಿ ಹೆಸರು

ಕನ್ನಡಮ್ಮ ಸುದ್ದಿ-ಕೊಪ್ಪಳ: ಜಿಲ್ಲೆಯ ಗಂಗಾವತಿ, ಮುನಿರಾಬಾದ್, ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು‌ ನಿಲ್ದಾಣ ಎಂದು ಮರುನಾಮಕರಣಕ್ಕೆ  ಸರ್ಕಾರದಿಂದ ಶಿಫಾರಸ್ಸು ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವುರು ಈ ಕುರಿತು ಮಾಹಿತಿ ನೀಡಿದ್ದು,ಈ ಶಿಫಾರಸನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿ ಕೊಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಈ ಮೂರು ನಿಲ್ದಾಣಗಳಿಗೆ ಮರುನಾಮಕರಣ ಮಾಡುವುದರ ಹಿಂದೆ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತೆ ಆಗುತ್ತದೆ. ಅಂಜನಾದ್ರಿಯು ರಾಮಾಯಣದಲ್ಲಿ ಬರುವ  ಆಂಜನೇಯನ  ಜನ್ಮಸ್ಥಳವಾಗಿದ್ದು, ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆಯಾಗಿದೆ. ಮಹಾತ್ಮ ಗಾಂಧಿ ಅವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ.

Total Views 13
RELATED ARTICLES

Most Popular

Recent Comments

KNN City News
Home
E-Paper