Monday, November 23, 2026
HomeBelagaviಸಾಮಾಜಿಕ ಜಾಲತಾಣದಲ್ಲಿ ಸಚಿವರ ವಿರುದ್ಧ ಅವಹೇಳಕಾರಿ ಹೇಳಿಕೆ: ಆರೋಪಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಸಚಿವರ ವಿರುದ್ಧ ಅವಹೇಳಕಾರಿ ಹೇಳಿಕೆ: ಆರೋಪಿ ಬಂಧನ

ಬೆಳಗಾವಿ
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಸರಕಾರದಲ್ಲಿರುವ ಸಚಿವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಆರೋಪಿ ನರಸಿಂಹ ಮೂರ್ತಿಯನ್ನು ಮಾರ್ಕೇಟ್ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಸರಕಾರದ ವಿವಿಧ ಸಚಿವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಆಪ್ತ ವಿಜಯ ತಳವಾರ ನರಸಿಂಹಮೂರ್ತಿ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮಾರ್ಕೆಟ್ ಪೊಲೀಸರು ಆರೋಪಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

Total Views 149
RELATED ARTICLES

Most Popular

Recent Comments

KNN City News
Home
E-Paper