Monday, November 23, 2026
HomeKoppalವಿಮಾನದಲ್ಲಿ ಪ್ರಯಾಣಿಸಿದ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳು

ವಿಮಾನದಲ್ಲಿ ಪ್ರಯಾಣಿಸಿದ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳು

ಕನ್ನಡಮ್ಮ ಸುದ್ದಿ-ಕೊಪ್ಪಳ : ಕೊಪ್ಪಳ ತಾಲ್ಲೂಕಿನ ಲಿಂಗದಳ್ಳಿ ಸರಕಾರಿ ಶಾಲೆಯ ಮಕ್ಕಳು ಶಿಕ್ಷಕರ ಸಹಕಾರದಿಂದ ಮೊದಲ ಬಾರಿಗೆ ಲೋಹದ ಹಕ್ಕಿ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಒದಗಿಬಂದಿತ್ತು. ವಿದ್ಯಾರ್ಥಿಗಳಿಗೆ ವಿಭಿನ್ನವಾಗಿ ಶಾಲಾ ಶೈಕ್ಷಣಿಕ ಪ್ರವಾಸ ಆಯೋಜಿಸಿದ ಖುಷಿ ಶಿಕ್ಷಕರು ಹಾಗೂ ಸಿಬ್ಬಂದಿಯಲ್ಲಿ ಕಂಡುಬಂದಿತು.

ಈ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸಿಬ್ಬಂದಿ ಶಾಲೆಯಿಂದ ತೋರಣಗಲ್‌ಗೆ ವಾಹನದಲ್ಲಿ ತೆರಳಿ ಅಲ್ಲಿಂದ ವಿಮಾನದಲ್ಲಿ ಹೈದರಾಬಾದ್‌ಗೆ ಪ್ರಯಾಣಿಸಿದರು.  ವಿಮಾನ ನಿಲ್ದಾಣದಲ್ಲಿ ಎಲ್ಲರೂ ಒಟ್ಟಾಗಿ ಫೋಟೊ ತೆಗೆಯಿಸಿಕೊಂಡು ಖುಷಿಪಟ್ಟರು. ಈ ಶಾಲೆಯ 30 ಜನ ವಿದ್ಯಾರ್ಥಿಗಳು, ಆರು ಜನ ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ಆರು  ಜನ ಶಿಕ್ಷಕರು ಡಿ. 9ರ ತನಕ ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದಾರೆ. ಇತ್ತೀಚೆಗೆ ಬೆಳಗಾವಿ ಜಿಲ್ಲೆಯಲ್ಲಿಯೂ ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗಿತ್ತು. ವಿಮಾನಯಾನದ ಖರ್ಚನ್ನು ಶಾಲೆಯ ಶಿಕ್ಷಕರು, ಗ್ರಾಮಸ್ಥರು ಹಾಗೂ ಖಾಸಗಿ ಕಂಪನಿಗಳಿಗೆ ಭರಿಸಲಾಗುತ್ತಿದೆ.  ಮಕ್ಕಳ ವಿಮಾನಯಾನದ ಪ್ರವಾಸಕ್ಕೆ ಶಾಲೆಯ ಆವರಣದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿ ‘ಕಲ್ಯಾಣ ಕರ್ನಾಟಕದಲ್ಲಿ ಮೊದಲ ಬಾರಿಗೆ ಲಿಂಗದಹಳ್ಳಿಯ ಸರ್ಕಾರಿ ಶಾಲೆಯ ಮಕ್ಕಳು ವಿಮಾನದಲ್ಲಿ ಪ್ರವಾಸ ಕೈಗೊಂಡಿದ್ದು ಖುಷಿ ನೀಡಿದೆ ಎಂದು ಹೇಳಿದರು. ಕಿರ್ಲೊಸ್ಕರ್ ಕಂಪನಿಯ ಪ್ರತಿನಿಧಿ ಡಿ.ನಾರಾಯಣ, ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ ಟಿ.ಎಸ್‌., ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಿಪ್ಪವ್ವ ನಾಯಕ್, ಮುರಳಿ ಲಿಂಗದಹಳ್ಳಿ, ಪಿಡಿಒ ಗೀತಾ ಕುಮಾರಿ ಸೇರಿದಂತೆ ಅನೇಕರು ಇದ್ದರು.

Total Views 20
RELATED ARTICLES

Most Popular

Recent Comments

KNN City News
Home
E-Paper