
ಬೆಳಗಾವಿ
ಧಾರವಾಡ ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.
ಬೆಳಗಾವಿ ನಗರ ಪೊಲೀಸ್ ನಲ್ಲಿ ಸಿಎಸ್ ಬಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಚನ್ನಕೇಶವ ಟಿಂಗರಿಕರ ಈ ಹಿಂದೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವೆ ವೇಳೆ ಜಿಪಂ ಸದಸ್ಯ ಯೋಗೇಶ್ ಗೌಡ ಬರ್ಬರ ಹತ್ಯೆಯಾಗಿತ್ತು. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸೂಚನೆಯಂತೆ ಕೆಲಸ ಮಾಡಿದ ಆರೋಪದ ಹಿನ್ನೆಲೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಬಂಧನಕ್ಕೆ ವಾರೆಂಟ್ ಜಾರಿ ಮಾಡಿ ಆದೇಶಿಸಿದೆ.
