
ಬೆಳಗಾವಿ
ಸ್ಮಾರ್ಟ್ ಸಿಟಿ ಕಾಮಗಾರಿ ಹಾಗೂ ಬೆಳಗಾವಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಸರಕಾರದ ಮುಖ್ಯಕಾರ್ಯದರ್ಶಿ ಶ್ಯಾಲಿನಿ ರಜನೀಶ್ ಕಾಮಗಾರಿಗಳನ್ನು ತ್ವರಿತ ರೀತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಮಂಗಳವಾರ ಬೆಳಗಾವಿ ಬಿಮ್ಸ್ ಆವರಣದಲ್ಲಿರುವ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುಗಳ ಮರಣ ಹಾಗೂ ಬಾಣಂತಿಯರ ಸಾವಿನ ಸುದ್ದಿ ಸಾಕಷ್ಟು ಸದ್ದು ಮಾಡಿತ್ತು. ಖುದ್ದು ವಿಶೇಷ ಕಾಳಜಿ ವಹಿಸಿದ ಶಾಲಿನಿ ರಜಿನೀಶ್ ಅವರು ಜಿಲ್ಲಾಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿ ಬಡವರ ಸೇವೆಗೆ ಸರಕಾರ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಪೂರಕ ಪೀಠೋಪಕರಣಗಳನ್ನು ಬೇಕಾಗಿದ್ದರೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಇನ್ನೂ ವ್ಯಾಕ್ಸಿನ್ ಡಿಪೋದಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಇದೇ ಸಂದರ್ಭದಲ್ಲಿ ಶಾಲಿನಿ ರಜನಿಶ್ ಪರಿಶೀಲನೆ ನಡೆಸಿದರು.
