
ಬೆಳಗಾವಿ
ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಮುಂದಾಗಿದ್ದ ಪಂಚಮಸಾಲಿ ಮುಖಂಡರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇವಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಪಂಚಮಸಾಲಿ ಮುಖಂಡರು ಕಲ್ಲು ತೂರಾಟ ನಡೆಸಿದ ಪರಿಣಾಮ
ಪೊಲೀಸ್ ಇನ್ಸ್‌ಪೆಕ್ಟರ್ ಸೇರಿ ಹದಿನೇಳು ಜನರಿಗೆ ಘಟನೆಯಲ್ಲಿ ಗಾಯವಾಗಿದ್ದು, ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂ ಹಿನ್ನೆಲೆಯಲ್ಲಿ ಕಲ್ಲು ಎಸೆದ ಐದು ಜನರ ಮೇಲೆ ದೂರು ದಾಖಲಾಗಿದೆ.
ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಕರ್ತವ್ಯ ನಿರತ ನೌಕರರಿಗೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿ ಕೊಲೆ ಮಾಡಲು ಯತ್ನಿಸಿದ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಪಡಿಸಿದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿಯಲ್ಲಿ ಹಿರೇಬಾಗೇವಾಡಿ ಸಿಪಿಐ ಆರ್.ಆರ್ ಪಾಟೀಲ್ ಅವರಿಂದ ಕೇಸ್ ದಾಖಲಾಗಿದೆ.
