Thursday, November 19, 2026
HomeBagalkoteಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾಗಿ ಮಹಾಂತೇಶಗೌಡ.ಬ ಪಾಟೀಲ ನೇಮಕ

ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾಗಿ ಮಹಾಂತೇಶಗೌಡ.ಬ ಪಾಟೀಲ ನೇಮಕ

ಕನ್ನಡಮ್ಮ ಸುದ್ದಿ-ಕೊಪ್ಪಳ : ಕೃಷಿ ಉದ್ಯಮಿ  ಮಹಾಂತೇಶಗೌಡ.ಬ. ಪಾಟೀಲ ಅವರನ್ನು ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಮಾಡಿದ್ದಾರೆ.

ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರ ಅನುಮೋದನೆ ಮೇರೆಗೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರಶಾಂತಕುಮಾರ್ ಅವರು ಮಹಾಂತೇಶಗೌಡ .ಬ.ಪಾಟೀಲ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ  ಸದಸ್ಯರಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಮಹಾಂತೇಶಗೌಡ.ಬ. ಪಾಟೀಲ ರು ಹಲವು ಸಮಾಜಿಕ ಚಿಂತನೆ, ವಿಚಾರಗಳನ್ನು ಅಳವಡಿಸಿಕೊಂಡು ಜನಪಯೋಗಿ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿದ್ದು, ರೈತರಿಗೆ ಆಧುನಿಕ ಕೃಷಿ ಪದ್ಧತಿಗೆ ಬೇಕಾದ ತಂತ್ರಜ್ಞಾನ ಇನ್ನಿತರ ಮಾಹಿತಿಗಳನ್ನು ನೀಡುವ ಪಾಟೀಲರ ನೇಮಕದಿಂದ ತೋಟಗಾರಿಕೆ ಕ್ಷೇತ್ರದ ರೈತರಿಗೆ ಹೆಚ್ಚು ನೇರವಾಗಲಿದೆ. ಇವರ ನೇಮಕಕ್ಕೆ ರೈತ ಸಮುದಾಯ ಅಭಿನಂದಿಸಿದೆ.

ಎಂದು ವಿಜ್ಞಾನಗಳ  ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾಗಿ  ನಾಮನಿರ್ದೇಶನ ಮಾಡಲು ಕಾರಣರಾದ ಸಿಎಂ ಸಿದ್ದರಾಮಯ್ಯನವರು, ಡಿಸಿಎಂ ಡಿ.ಕೆ‌ ಶಿವಕುಮಾರ್, ತೋಟಗಾರಿಕೆ  ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ,  ಜಿಲ್ಲಾಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ,  ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರೆಡ್ಡಿ, ಸಂಸದ ರಾಜಶೇಖರ ಹಿಟ್ನಾಳ, ಮಾಜಿ ಸಂಸದರಾದ ಕರಡಿ ಸಂಗಣ್ಣ,ಮಾಜಿ ಶಾಸಕರಾದ ಬಸವರಾಜ ಹಿಟ್ನಾಳ, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ, ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ, ಕಾಡಾ ಅಧ್ಯಕ್ಷರಾದ ಹಸನ್ ಸಾಬ್ ದೋಟಿಹಾಳ್, ಮಾಜಿ ಎಂಎಲ್ಸಿ ಹೆಚ್.ಆರ್ ಶ್ರೀನಾಥ್, ಸೇರಿದಂತೆ ಕಾಂಗ್ರೆಸ್ ಪಕ್ಷದಎಲ್ಲಾ ಮುಖಂಡರಿಗೆ  ಮಹಾಂತೇಶಗೌಡ ಪಾಟೀಲ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ. *ನನನ್ನು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ಆಡಳಿತ ಮಂಡಳಿಯ ಸದಸ್ಯನಾಗಿ ಘನವೇತ್ತ ಕರ್ನಾಟಕದ ರಾಜ್ಯಪಾಲರು ನಾಮನಿರ್ದೇಶನ ಮಾಡಿದ್ದಾರೆಂದು ತಿಳಿಸಲು ಹರ್ಷಿತನಾಗಿದ್ದೇನೆ. ರಾಜ್ಯ ಸರ್ಕಾರ  ಸಹಕಾರದಿಂದ  ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ನಾಮನಿರ್ದೇಶನ ಸದಸ್ಯನಾಗಿ ನೇಮಕವಾಗಿದ್ದೇನೆ.. ಹೆಚ್ಚಿನ ರೀತಿಯಲ್ಲಿ ರೈತಪರ ಕೆಲಸ ಮಾಡಲು ಎಲ್ಲರ ಸಹಕಾರ ಇರಲಿ : ಮಹಾಂತೇಶಗೌಡ .ಬ. ಪಾಟೀಲ, ನೂತನ ನಾಮನಿರ್ದೇಶನ ಗೌರವಾನ್ವಿತ ಆಡಳಿತ ಮಂಡಳಿ ಸದಸ್ಯರು, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ

Total Views 187
RELATED ARTICLES

Most Popular

Recent Comments

KNN City News
Home
E-Paper