Monday, November 23, 2026
HomeKoppalಪ್ರಸಕ್ತ ವರ್ಷದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 62 ದೌರ್ಜನ್ಯ ಪ್ರಕರಣಗಳು ದಾಖಲು || 18 ಪ್ರಕರಣಗಳು...

ಪ್ರಸಕ್ತ ವರ್ಷದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 62 ದೌರ್ಜನ್ಯ ಪ್ರಕರಣಗಳು ದಾಖಲು || 18 ಪ್ರಕರಣಗಳು ಎಫ್‌ಐಆರ್, 39 ಪ್ರಕರಣಗಳು ಚಾರ್ಜ್ ಶೀಟ್ ಹಂತದಲ್ಲಿ ..

* ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಸಮಿತಿ ಸಭೆ : ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತ ಪರಿಹಾರ ಡಿಸಿ ಭರವಸೆ

ಕನ್ನಡಮ್ಮ ಸುದ್ದಿ-ಕೊಪ್ಪಳ: ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಒದಗಿಸಲು ಅಗತ್ಯ ಕ್ರಮವಹಿಸಬೇಕು ಎಂದು ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರ  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ದೌರ್ಜನ್ಯ, ಗಲಭೆ ಪ್ರಕರಣಗಳ ತನಿಖೆಯಲ್ಲಿ ಸಂತ್ರಸ್ತರೆಂದು ಸಾಬೀತಾದವರಿಗೆ ಸರ್ಕಾರದಿಂದ ನಿಗದಿಪಡಿಸಿದ ಪರಿಹಾರವನ್ನು ಕೂಡಲೇ ಒದಗಿಸಬೇಕು. ಪರಿಶಿಷ್ಟ ಜಾತಿ, ಪಂಗಡಗಳ ಕಾಲೋನಿಯಲ್ಲಿ ಅಗತ್ಯವಿರುವ ರಸ್ತೆ, ಕುಡಿಯುವ ನೀರು, ಶೌಚಾಲಯ, ಚರಂಡಿ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ದೂರು ಸಲ್ಲಿಸಲು ಬಂದಾಗ ಯಾವುದೇ ಕಾರಣ ನೀಡದೆ ದೂರು ಸ್ವೀಕರಿಸಿ. ಪ್ರಕರಣ ದಾಖಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ನಿಗಮಗಳಿಂದ ದೊರೆಯುವ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಬೇಕು ಎಂದು ಡಿಸಿ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಪೊಲೀಸ್ ಠಾಣೆಯಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ತನಿಖೆ ನಡೆಯುತ್ತಿದ್ದು, ಸಂತ್ರಸ್ತರಿಗೆ ಅಗತ್ಯ ಪರಿಹಾರ ಒದಗಿಸಲಾಗಿದೆ. ಪ್ರತಿ ತಿಂಗಳ ಎರಡನೇ ಭಾನುವಾರದಂದು ಎಸ್.ಸಿ., ಎಸ್.ಟಿ ಜನಾಂಗದವರ ಕುಂದುಕೊರತೆಗಳ ಸಭೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಎಸ್ಸಿಪಿ-ಟಿಎಸ್ಪಿ ಯೋಜನೆಯ ಮೂಲ ಧ್ಯೇಯ ಮತ್ತು ಮಾನದಂಡಗಳಿಗೆ ಅನುಸಾರವಾಗಿ ಇಲಾಖೆಗಳು ಕಾರ್ಯನಿರ್ವಹಿಸಬೇಕು. ಈ ಯೋಜನೆಗಳನ್ನು ಜಾಗರೂಕತೆಯಿಂದ ನಿರ್ವಹಿಸಬೇಕು. ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಯಾವ ಉದ್ದೇಶಕ್ಕೆ ಬಳಸಲಾಗಿದೆ, ಯಾವ ಪ್ರದೇಶದಲ್ಲಿ ಕಾಮಗಾರಿ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಸ್ಪಷ್ಟವಾಗಿ ನೀಡಬೇಕು. ಅಲ್ಲದೇ ಇಲಾಖೆಗಳಿಗೆ ನಿಗದಿಪಡಿಸಲಾದ ಗುರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಮಾತನಾಡಿ, 2024ನೇ ಕ್ಯಾಲೆಂಡರ್ ವರ್ಷದಲ್ಲಿ ಒಟ್ಟು 62 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 18 ಪ್ರಕರಣಗಳು ಎಫ್‌ಐಆರ್, 39 ಪ್ರಕರಣಗಳು ಚಾರ್ಜ್ ಶೀಟ್ ಹಂತದಲ್ಲಿದ್ದು, ಒಟ್ಟು 57 ಪ್ರಕರಣಗಳಲ್ಲಿ 1,88,22,500 ರೂ.ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

*ಎಸ್ಸಿಪಿ-ಟಿಎಸ್ಪಿ ಪ್ರಗತಿ ಪರಿಶೀಲನೆ:* ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ, ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ನವೆಂಬರ್-2024ರ ಅಂತ್ಯದವರೆಗಿನ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಸಭೆಯಲ್ಲಿ ಜಿ.ಪಂ. ಸಿಇಒ ರಾಹುಲ್ ರತ್ನಂ ಪಾಂಡೇಯ, ಎಸ್ಪಿ ಡಾ.ರಾಮ್ ಎಲ್ ಅರಸಿದ್ಧಿ , ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿ.ಪಂ. ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಸೇರಿದಂತೆ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರುಗಳು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶಿಲ್ದಾರರು ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Total Views 24
RELATED ARTICLES

Most Popular

Recent Comments

KNN City News
Home
E-Paper