Monday, November 23, 2026
HomeKoppalಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅವಧಿ ವಿಸ್ತರಣೆ

ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅವಧಿ ವಿಸ್ತರಣೆ

ಕನ್ನಡಮ್ಮ ಸುದ್ದಿ-ಕೊಪ್ಪಳ : 2024-25ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್ ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 15ರ ವರಗೆ ಅವಕಾಶ ಕಲ್ಪಿಸಲಾಗಿದ್ದು, ವಿವರಗಳಿಗಾಗಿ ವೆಬ್‌ಸೈಟ್  https://bcwd.karnataka.gov.in/ ನ್ನು ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ-8050770004 ಗೆ ಸಂಪರ್ಕಿಸುವಂತೆ ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Total Views 64
RELATED ARTICLES

Most Popular

Recent Comments

KNN City News
Home
E-Paper