ಕನ್ನಡಮ್ಮ ಸುದ್ದಿ-ಕೊಪ್ಪಳ : ಭೂಪಾಲ್ ನ ಬಿ.ಎಸ್.ಅಬ್ದುಲ್ ರೆಹಮಾನ್ ವಿಶ್ವವಿದ್ಯಾಲಯದಲ್ಲಿ ಜ.6 ರಿಂದ 8 ರವರೆಗೆ ಜರುಗಲಿರುವ ಅಖಿಲ ಭಾರತಅಂತರ್ ವಿಶ್ವವಿದ್ಯಾಲಯ ಮಹಿಳೆಯರ ಕರಾಟೆ ಪಂದ್ಯಾಟಕ್ಕೆ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿನಿ ಕು. ನೇತ್ರಾ ಇವರು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ತಂಡದ ಆಟಗಾರರಾಗಿ ಆಯ್ಕೆಯಾಗಿದ್ದಾರೆ.
ಪಂದ್ಯಾಟಕ್ಕೆ ವಿದ್ಯಾರ್ಥಿನಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ. ಆರ್ ಮರೇಗೌಡ ಮತ್ತು ಶ್ರೀ ಗವಿಸಿದ್ಧೇಶ್ವರ ಟ್ರಸ್ಟಿನ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಡಾ. ಚನ್ನಬಸವ,ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ವಿನೋದ ಸಿ. ಮುದಿನಬಸನಗೌಡರ ಹಾಗೂ ಕಾಲೇಜಿನ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳೆಯರ ಕರಾಟೆ ಸ್ಪರ್ಧೆಗೆ ಕೊಪ್ಪಳದ ಕು.ನೇತ್ರಾ ಆಯ್ಕೆ
Total Views 77
