Monday, November 23, 2026
HomeHeadlinesಕೊಪ್ಪಳದಲ್ಲಿ ಜ.12 ರಿಂದ 18ರವರೆಗೆ 19 ವಿವಿಧ ಸಾಂಪ್ರದಾಯಿಕ, ದೇಶಿಯ ಕ್ರೀಡೆ, ಪ್ರದರ್ಶನ ಪಂದ್ಯಾವಳಿಗಳ ಆಯೋಜನೆ...

ಕೊಪ್ಪಳದಲ್ಲಿ ಜ.12 ರಿಂದ 18ರವರೆಗೆ 19 ವಿವಿಧ ಸಾಂಪ್ರದಾಯಿಕ, ದೇಶಿಯ ಕ್ರೀಡೆ, ಪ್ರದರ್ಶನ ಪಂದ್ಯಾವಳಿಗಳ ಆಯೋಜನೆ : ಸಂಸದ ಕೆ.ರಾಜಶೇಖರ ಹಿಟ್ನಾಳ

ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮಗಳ ಸಹಭಾಗಿತ್ವದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕ್ರೀಡಾಕೂಟ

ಕನ್ನಡಮ್ಮ ಸುದ್ದಿ-ಕೊಪ್ಪಳ : ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಸಿದ್ದಿಯಾದ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಂಗವಾಗಿ ಗವಿಶ್ರೀ ಕ್ರೀಡಾ ಉತ್ಸವ-2025ರ ಕ್ರೀಡಾಕೂಟದಲ್ಲಿ 19 ರೀತಿಯ ವಿವಿಧ ಸಾಂಪ್ರದಾಯಿಕ ಹಾಗೂ ದೇಶಿಯ ಕ್ರೀಡೆಗಳು ಮತ್ತು ಪ್ರದರ್ಶನ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ ಎಂದು ಸಂಸದರಾದ ಕೆ.ರಾಜಶೇಖರ  ಹಿಟ್ನಾಳ ಹೇಳಿದರು.

ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ  ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮಗಳ ಸಹಭಾಗಿತ್ವದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕ್ರೀಡಾಕೋಟದ ಯಶಸ್ವಿಗೆ ಸಹಕರಿಸುವಂತೆ ಕೋರಿದರು.

ಆಹ್ವಾನಿತ ತಂಡಗಳಿಂದ ಕ್ರಿಕೆಟ್ ಪಂದ್ಯಾವಳಿಯು ನಗರದ ತಾಲ್ಲೂಕ ಕ್ರೀಡಾಂಗಣದಲ್ಲಿ ಜ. 12 ಮತ್ತು 13 ರಂದು  ಹಾಗೂ ಜ. 14 ರಂದು ಫೈನಲ್ ಪಂದ್ಯಾವಳಿ. ಪುರುಷ ಮತ್ತು ಮಹಿಳೆಯರಿಗೆ 12 ಕಿ.ಮಿ. ಮ್ಯಾರಥಾನ್ ಓಟ , ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಆಕರ್ಷಕ ಮಲ್ಲಕಂಬ ಪ್ರದರ್ಶನ ಜರುಗಲಿದ್ದು, ಹೊಳೆಆಲೂರಿನ ಜ್ಞಾನ ಸಿಂಧು ಅಂಧ ಮಕ್ಕಳ ಶಾಲೆ, ಸಿರಗುಪ್ಪದ ಯೋಗ ಮಲ್ಲಕಂಬ ತಂಡ ಮತ್ತು ಕೊಪ್ಪಳದ ಮಹಿಳಾ ಮಲ್ಲಕಂಬ ತಂಡ ಪಾಲ್ಗೊಳ್ಳಲಿದ್ದಾರೆ ಎಂದರು. ಜ. 15 ರಂದು ಬೆಳಿಗ್ಗೆ 11 ಗಂಟೆಗೆ ಗವಿಮಠ ಆವರಣದಲ್ಲಿ ನಡೆಯಲಿರುವ ಯುವಕರ ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯು ಮುಕ್ತ ಆಹ್ವಾನ, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಶ್ವಾನ ಪ್ರದರ್ಶನ, ಕರಾಟೆ ಪ್ರದರ್ಶನವಿದೆ. ಯುವಕರಿಂದ ಎತ್ತಿನ ಬಂಡಿ ಜಗ್ಗುವ ಸ್ಪರ್ಧೆ, ಆಹ್ವಾನಿತ ರಾಷ್ಟ್ರ ಹಾಗೂ ರಾಜ್ಯ ಮಟ್ಟದ, ಪುರುಷ ಮತ್ತು ಮಹಿಳಾ ಕುಸ್ತಿ ಪಟುಗಳಿಂದ ಕುಸ್ತಿ ಪಂದ್ಯಾವಳಿ ನಡೆಯಲಿದ್ದು,

ಮಹಿಳೆಯರಿಗೆ ಥ್ರೋಬಾಲ್ ಸ್ಪರ್ಧೆ, ಪುರುಷರ ಡಬಲ್ಸ್ ಶೆಟಲ್ ಬ್ಯಾಡ್ಮಿಂಟನ್ ಸ್ಪರ್ಧೆ, 15 ವರ್ಷದ ಒಳಗಿನ ಮಕ್ಕಳಿಗಾಗಿ ಹಮ್ಮಿಕೊಂಡ ಛದ್ಮವೇಷ/ ಫ್ಯಾಷನ್ ಷೋ, ಪುರುಷ ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ ಸ್ಪರ್ಧೆ, ಜ. 17 ರಂದು ಆಹ್ವಾನಿತ ಪುರುಷರ ದೇಹದಾರ್ಡ್ಯತೆ (Body Building) ಸ್ಪರ್ಧೆಯಲ್ಲಿ ನೂರಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಪುರುಷ ಹಾಗೂ ಮಹಿಳೆಯರ ಮುಕ್ತ ವಾಲಿಬಾಲ್ ಪಂದ್ಯಾವಳಿಗಳು, ಪುರುಷ ಹಾಗೂ ಮಹಿಳೆಯರಿಗೆ ಮುಕ್ತ ಕಬಡ್ಡಿ ಪಂದ್ಯಾವಳಿಯನ್ನು  ಹಮ್ಮಿಕೊಂಡಿದ್ದು, ಫೈನಲ್‌ ಪಂದ್ಯಾವಳಿ, ಸಾರ್ವಜನಿಕರಿಗೆ ಮುಕ್ತ ಗಾಳಿಪಟ ಹಾರಟ ಸ್ಪರ್ಧೆ, ಹಾಗೂ ದೇಶದ ಪ್ರಸಿದ್ಧ 5 ತಂಡಗಳಿಂದ ಬೃಹತ್ ಗಾತ್ರದ ಗಾಳಿಪಟ ಪ್ರದರ್ಶನ ಮತ್ತು ರಾತ್ರಿ 10 ರಿಂದ 12 ಗಂಟೆವರೆಗೆ ಎಲ್.ಇ.ಡಿ ಗಾಳಿಪಟ ಪ್ರದರ್ಶನ ಜರುಗಲಿದೆ.

ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರೆಗೆ ಸೂಕ್ತ ಬಹುಮಾನಗಳನ್ನು ನೀಡಲಾಗುವುದು, ಜಾತ್ರೆಯೊಂದಿಗೆ ನಡೆಯುವ ಈ ಕ್ರೀಡಾಕೂಟವು ಉತ್ತೇಜನ ಮತ್ತು ಕ್ರೀಡೆಗಳ ಮಹತ್ವದ ಜೊತೆ  ಸಾಂಪ್ರದಾಯಿಕ ಹಾಗೂ ದೇಶಿಯ ಕ್ರೀಡೆಗಳ ಉಳಿವಿಕೆ ಅಗತ್ಯವಾಗಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಮಾಜಿ ಸಂಸದರಾದ ಕರಡಿ ಸಂಗಣ್ಣ, ಮುಖಂಡರಾದ ಸಿ.ವಿ. ಚಂದ್ರಶೇಖರ್, ಮಾಜಿ ಜಿ.ಪಂ ಸದಸ್ಯ ಗೂಳಪ್ಪ ಹಲಗೇರಿ,  ನಗರಸಭೆ ಸದಸ್ಯರಾದ ರಾಜಶೇಖರ ಆಡೂರ, ಅಜೀಂ ಅತ್ತರ್, ಅರುಣ್ ಅಪ್ಪು ಶೆಟ್ಟಿ ಸೇರಿದಂತೆ ಇತರರು ಇದ್ದರು.

Total Views 51
RELATED ARTICLES

Most Popular

Recent Comments

KNN City News
Home
E-Paper