ಕನ್ನಡಮ್ಮ ಸುದ್ದಿ-ಕೊಪ್ಪಳ: 2023 ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಪತ್ರಕರ್ತ ಸಿರಾಜ್ ಬಿಸರಳ್ಳಿ ಹಾಗೂ ಮಾಧ್ಯಮ ಅಕಾಡೆಮಿಯ ದತ್ತಿ ಪ್ರಶಸ್ತಿ ಪುರಸ್ಕೃತ ಯುವ ಪತ್ರಕರ್ತ ಮಹಮ್ಮದ್ ಅಖೀಲ್ ಉಡೇವು ಅವರನ್ನು ಸನ್ಮಾಸಿ ಗೌರವಿಸಲಾಯಿತು.
ನಗರದ ಪ್ರವಾಸಿ ಮಂದಿರದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಕರಡಿ ಸಂಗಣ್ಣ ಶಾಸಕ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಇತರ ಗಣ್ಯರು ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಪತ್ರಕರ್ತ ಸಿರಾಜ್ ಬಿಸರಳ್ಳಿ ಹಾಗೂ ಮಾಧ್ಯಮ ಅಕಾಡೆಮಿಯ ದತ್ತಿ ಪ್ರಶಸ್ತಿ ಪುರಸ್ಕೃತ ಯುವ ಪತ್ರಕರ್ತ ಮಹಮ್ಮದ್ ಅಖೀಲ್ ಉಡೇವು ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

