
ಬೆಳಗಾವಿ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕುತ್ತಿಗೆ ಹಾಗೂ ಬೆನ್ನಿಗೆ ಪೆಟ್ಟಾಗಿದೆ. ಅವರಿಗೆ ಶುಗರ್ ಇರುವುದವರಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು
ವಿಜಯಾ ಆಸ್ಪತ್ರೆಯ ವೈದ್ಯ ಡಾ. ರವಿ ಪಾಟೀಲ್ ಹೇಳಿದರು.
ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿದಾಗ ಎಂಆರ್ ಐ ಮಾಡಿದಾಗ ಎಲ್ 1 ಮತ್ತು ಎಲ್ 4 ಗೆ ಪೆಟ್ಟಾಗಿದೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದರು.
ಇನ್ನೂ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿದಾಗ ಮೆದುಳಿಗೆ ಬಾವು ಬಂದಿದೆ. ಅದಕ್ಕೆ ಅವರು ಚಿಕಿತ್ಸೆ ಪಡೆದು ಮನೆಗೆ ಹೋಗಿ ಬಂದು ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿದ್ದಾರೆ ಎಂದರು.
ಗನ್ ಮ್ಯಾನ್ ಮತ್ತು ಅವರು ಆಪ್ತರಕ್ಷಕ ದೂರು ಕೊಟ್ಟು ಬರುವಾಗಿ ಹೇಳಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಒಂದು ತಿಂಗಳ ವಿಶ್ರಾಂತಿ ಪಡೆಯಬೇಕು ಹಾಗೂ ಚನ್ನರಾಜ್ 8 ದಿನ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದರು.
