
ಬೆಳಗಾವಿ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯವಾಗಿದ್ದಾರೆ. ಆದಷ್ಟು ಬೇಗ ಹುಷಾರಗಲಿ. ಚೇತರಿಸಿಕೊಳ್ಳಲು ಸಮಯಾವಕಾಶ ಬೇಕು ಎಂದು ವೈದ್ಯರು ಹೇಳಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಗುರುವಾರ ರಾತ್ರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕಳೆದ ಮಂಗಳವಾರ ಅವರ ಕಾರು ಅಪಘಾತವಾಗಿತ್ತು. ವೈದ್ಯರು ಸೂಚನೆ ಮೇರಗೆ ಇನ್ನೊಂದು ಮೂರನ್ನಾಲ್ಕು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯಬೇಕು. ಆದಷ್ಟು ಬೇಗ ಗುಣಮುಖರಾಗಲಿದ್ದಾರೆ ಎಂದರು.
