
ಬೆಳಗಾವಿ
ಹಿಡಕಲ್ ಡ್ಯಾಮ್ ಬಳಿ ನರೇಗಾ ಕಾಮಗಾರಿಗೆ ಟ್ರಕ್ ನಲ್ಲಿ ಕೆಲಸಕ್ಕೆ ಕರೆದುಕೊಂಡು ಹೋಗುವ ವೇಳೆ ಬುಲೆಟ್ ಗೆ ಡಿಕ್ಕಿ ಹೊಡೆದ ಪರಿಣಾಮ 30ಕ್ಕೂ ಅಧಿಕ ಜನ ಕಾರ್ಮಿಕರು ಗಾಯಗೊಂಡ ಘಟನೆ ನಡೆದಿದೆ.
29 ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರೆ ಓರ್ವ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
