
ಬೆಳಗಾವಿ
ಅಕ್ರಮವಾಗಿ ಗೋವುಗಳನ್ನ ಸಾಗಿಸುತ್ತಿದ್ದ ವಾಹನವನ್ನು ಹುಕ್ಕೇರಿ ಟೋಲ್ ಬಳಿ ತಡೆದ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿಯಿಂದ ಹುಬ್ಬಳ್ಳಿಗೆ ಸಾಗಿಸುತ್ತಿದ್ದ ಹತ್ತು ಆಕಳುಗಳ ರಕ್ಷಣೆ ಮಾಡಿದ್ದಾರೆ. ಸಂಶಯ ಬಂದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದದು ಬೆಳಕಿಗೆ ಬಂದಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.
