
ಬೆಳಗಾವಿ
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಸಮಸ್ಯೆಗಳು ಎದುರಾಗದಂತೆ ಮುಂಚಿತವಾಗಿ ಕುಡಿಯುವ ನೀರು ಪೂರೈಕೆಗೆ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಶನಿವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಮಾತನಾಡಿದರು. ಕಲುಷಿತ ಕುಡಿಯುವ ನೀರು ಸರಬರಾಜು ಆಗದಂತೆ ಕಡ್ಡಾಯವಾಗಿ ನೀರಿನ ಪರೀಕ್ಷೆಗಳನ್ನು ಮಾಡಿಸಬೇಕು ಎಂದರು.
