
ಬೆಳಗಾವಿ
ವಸತಿ ನಿಲಯದಲ್ಲಿ ಬಿಸಿಎ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನಡೆದಿದೆ.
ವಿದ್ಯಾರ್ಥಿನಿ ಶಿಲ್ಪಾ ಯರಮಸನಾಳ(20) ಆತ್ಮಹತ್ಯೆಗೆ ಶರಣು.
ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಹಾಸ್ಟೆಲ್ ನ ರೂಮ್ ನಂ.5ರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆಯಿಂದ ಬೆಚ್ಚಿ ಬಿದ್ದ ಇನ್ನೂಳಿದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರಿಗೆ ಮಾಹಿತಿ ನೀಡಿ ಬರುವಿಕೆಗಾಗಿ ಮಾಳಮಾರುತಿ ಪೊಲೀಸರು ಕಾಯುತ್ತಿದ್ದಾರೆ.
