Thursday, November 19, 2026
HomeBelagaviಪತ್ರಕರ್ತರ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ: ಡಿಸಿ

ಪತ್ರಕರ್ತರ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ: ಡಿಸಿ

ಬೆಳಗಾವಿ
ಬೆಳಗಾವಿ ಪತ್ರಕರ್ತರ ಭವನ ನಿರ್ಮಾಣಕ್ಕೆ ರೂ. 10 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಬುಧವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಂಗಳೂರು ಹೊರತುಪಡಿಸಿ ಬೆಳಗಾವಿ ದೊಡ್ಡ ಜಿಲ್ಲೆಯಾಗಿದೆ.‌ ಇಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡಿ, ಶಂಕು ಸ್ಥಾಪನೆಯನ್ನು ಮಾಡಲಾಗಿದೆ. ಅಲ್ಲದೇ ಈಗಾಗಲೇ ಕಟ್ಟಡದ ನೀಲನಕ್ಷೆ ಸಿದ್ದಪಡಿಸಲಾಗಿದ್ದು. ಶೀಘ್ರವೇ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ನೂತನ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡದ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಸಚಿವರೊಂದಿಗೆ ಎರಡು ಕಡೆಗಳಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿತ್ತು. ಆದರೆ ಆ ಎರಡು ಸ್ಥಳಗಳು ನಗರದಿಂದ ದೂರ ಆಗುತ್ತದೆ. ಇದರಿಂದ ಕಾರ್ಯ ನಿಮಿತ್ತ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುವ ಜಿಲ್ಲೆಯ ಜನತೆಗೆ ಅನಾನುಕೂಲ ಆಗುತ್ತದೆ. ಆದ್ದರಿಂದ ಈಗಿರುವ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿ ರುವ ಹಳೆಯ ಕಟ್ಟಡವನ್ನು ತೆರವುಗೊಳಿಸಿ. ಅಲ್ಲಿಯೇ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಿಸಲು ‌ತೀರ್ಮಾನಿಸಲಾಗಿದೆ. ಈಗಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಐತಿಹಾಸಿಕವಾಗಿರುವುದರಿಂದ ಅದನ್ನು ತೆರವುಗೊಳಿಸದೆ.‌
ನವೀಕರಣ ಮಾಡಲಾಗುವುದು. ಅಲ್ಲದೇ ಮಳೆಗಾಲ‌ ಸಮಯದಲ್ಲಿ ಛಾವಣಿ ಸೋರುತ್ತಿದೆ. ಆದ್ದರಿಂದ ನವೀಕರಣ ಜತೆಗೆ ಹೊಸ ಕೊಠಡಿಗಳನ್ನು ನಿರ್ಮಿಸಲಾಗುವುದು. ನೂತನ ಕಟ್ಟಡ ನಿರ್ಮಾಣದ ಬಳಿಕ ಬೇರೆ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.
ಬೇಸಿಗೆಕಾಲದಲ್ಲಿ ಜಿಲ್ಲೆಯ ಜನ ,ಜಾನುವಾರುಗಳಿಗೆ ಕುಡಿಯುವ ನೀರಿನ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ. ಆದ್ದರಿಂದ ಜಿಲ್ಲೆಯ ಜನತೆ ಯಾವುದೇ ಕಾರಣಕ್ಕೂ ಆತಂಕ ಪಡುವ ಅವಶ್ಯಕತೆ ಇಲ್ಲ. ಇದುವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗಿರುವ ಬಗ್ಗೆ ವರದಿಯಾಗಿಲ್ಲ. ಅಲ್ಲದೆ ಬೇಸಿಗೆಕಾಲವನ್ನು ಸಮರ್ಪಕವಾಗಿ ನಿರ್ವಹಿಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಆದ್ದರಿಂದ ಜನತೆ ಯಾವುದೇ ಕಾರಣಕ್ಕೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಅಭಯ ನೀಡಿದರು.
ಮುಂದಿನ 42 ವಾರಗಳ ಕಾಲ ಅಗತ್ಯವಿರುವ ಮೇವು ಜಿಲ್ಲೆಯಲ್ಲಿದೆ. ಅಲ್ಲದೇ ಜಿಲ್ಲೆಯ ‌ಎಲ್ಲ ಜಲಾನಯನಗಳಲ್ಲಿ ಸಮರ್ಪಕ ನೀರು ಸಂಗ್ರಹವಾಗಿದ್ದರಿಂದ ಕುಡಿಯುವ ನೀರಿನ ಸಮಸ್ಯೆ ಉದ್ಬವವಾಗುವುದಿಲ್ಲ ಎಂಬ ವಿಶ್ವಾಸ ಇದೆ ಎಂದರು.

Total Views 204
RELATED ARTICLES

Most Popular

Recent Comments

KNN City News
Home
E-Paper