
ಬೆಳಗಾವಿ
ಕಳೆದ ಏ. 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ಮಾಡಿ ಪ್ರತಿಕಾರ ತೀರಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮಾಜಿ ಸೈನಿಕರು ಸಿಹಿ ಹಂಚಿ ಸಂಭ್ರಮಿಸಿದರೆ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಈ ಕ್ರಮಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರಿಸಲಾಗಿದೆ. ‘‘ನೇಪಾಳಿ ಪ್ರಜೆ ಸೇರಿದಂತೆ 26 ಜನರ ಪ್ರಾಣವನ್ನು ಬಲಿ ಪಡೆದ ಬರ್ಬರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ನಿಖರ ಮತ್ತು ಸಂಯಮದ ಪ್ರತಿಕ್ರಿಯೆಯಾಗಿ ಭಾರತ ಆಪರೇಷನ್ ಸಿಂಧೂರ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
