
ಬೆಳಗಾವಿ
ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯೂ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೂ ಟಿಳಕವಾಡಿ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ಕನ್ನಡಮ್ಮ ನಿರಂತರವಾಗಿ ಸುದ್ದಿ ಪ್ರಕಟಿಸಿತ್ತು. ಸಂತ್ರಸ್ತ ಬಾಲಕಿ ಹಾಗೂ ಕುಟುಂಬಕ್ಕೆ ನ್ಯಾಯ ಸಿಗುವಂತಾಗಲಿ ಎನ್ನುವುದು ಕನ್ನಡಮ್ಮದ ಮೂಲಕ ಜನರ ಆಶಯವಾಗಿದೆ
