Monday, November 23, 2026
HomeBelagaviಸಂತಿಬಸ್ತವಾಡದಲ್ಲಿ ಶಾಂತಿ ಸಭೆ ನಡೆಸಿದ ಸಚಿವೆ ಲಕ್ಷ್ಮೀ

ಸಂತಿಬಸ್ತವಾಡದಲ್ಲಿ ಶಾಂತಿ ಸಭೆ ನಡೆಸಿದ ಸಚಿವೆ ಲಕ್ಷ್ಮೀ

ಬೆಳಗಾವಿ
ಸೋಮವಾರ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಸಂತಿಬಸ್ತವಾಡ ಗ್ರಾಮಕ್ಕೆ ಭೇಟಿ ನೀಡಿ, ಶಾಂತಿ ಸಭೆ ನಡೆಸಿದರು.
ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ ಸಚಿವರು, ವಿಮಾನ ನಿಲ್ದಾಣದಿಂದ ನೇರವಾಗಿ ಗ್ರಾಮಕ್ಕೆ ತೆರಳಿ, ಘಟನೆಯ ಮಾಹಿತಿ ಪಡೆದು ಶಾಂತಿ ಸಭೆ ನಡೆಸಿದರು. ಎಲ್ಲ ಸಮಾಜದವರು ಶಾಂತಿಯಿಂದ ಇರುವಂತೆ ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು. ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ‌ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು.

Total Views 171
RELATED ARTICLES

Most Popular

Recent Comments

KNN City News
Home
E-Paper