
ಬೆಳಗಾವಿ
ಬೆಳಗಾವಿಯಲ್ಲಿ ಹಿಡಕಲ್ ಡ್ಯಾಮ್ ಹಿನ್ನೀರಿಗೆ ಜಮೀನು ಕಳೆದುಕೊಂಡ ರೈತರಿಗೆ ನೀರಾವರಿ ಇಲಾಖೆಯಿಂದ ಪರಿಹಾರ ಕೊಡುವುದು ಹಾಗೂ ಉತ್ತಾರ ಪತ್ರ ನೀಡದ ಅಧಿಕಾರಿಗಳ ವಿರುದ್ಧ ಬುಧವಾರ ಇಲ್ಲಿನ ರೈತರು ಹಾಗೂ ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ, ಗುಡನಟ್ಟಿ ಬೀರಹೊಳ್ಳಿ ಗ್ರಾಮದ ರೈತರು ಹಲವಾರು ಬಾರಿ ಹೋರಾಟ ಮಾಡಿದರೂ ನೀರಾವರಿ ಇಲಾಖೆ ಪರಿಹಾರ ಕೊಟ್ಟಿಲ್ಲ ಎಂದು ಹಿಡಕಲ್ ಡ್ಯಾಮ್ ,ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.
396ಎಕರೆ ಜಮೀನಿಗೆ ಪರಿಹಾರ ನೀಡುವಂತೆ ಕಚೇರಿಯಿಂದ ಕಚೇರಿಗೆ ಅಲೆದಾಡಿದರೂ ಎರಡು ವರ್ಷಗಳ ಹಿಂದೆಯೇ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ನೀಡಿದರೂ ಇಲ್ಲಿಯವರೆಗೂ ಪರಿಹಾರ ನೀಡಿಲ್ಲ. ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಉತಾರ್ ಪತ್ರ ನೀಡುವಂತೆ ಸೂಚನೆ ನೀಡಿದರೂ ನೀರಾವರಿ ಇಲಾಖೆಯ ಅಧಿಕಾರಿಗಳು ಉತಾರ್ ನೀಡಿದರೇ ಪ್ರಮೋಷನ್ ಸಿಗುವುದಿಲ್ಲ ಎಂದು ರೈತರಿಗೆ ಉತಾರ್ ನೀಡುತ್ತಿಲ್ಲ. ಅಲ್ಲದೆ ಉತಾರ್ ನೀಡಲು ಐದು ಲಕ್ಷ ರೂ. ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.
ಸಂತೋಷ ಪಾಟೀಲ್, ಬಾಳೇಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
