Monday, November 23, 2026
HomeBelagaviಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಭ್ರಷ್ಟ ಅಧಿಕಾರಿಗಳಿಗೆ ಶಾಕ್

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಭ್ರಷ್ಟ ಅಧಿಕಾರಿಗಳಿಗೆ ಶಾಕ್

ಬೆಳಗಾವಿ
ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಭ್ರಷ್ಟ ಅಧಿಕಾರಿಗಳಿಗೆ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು ಇಬ್ಬರು ಸಿಬ್ಬಂದಿಗಳು ಲಂಚ ಪಡೆಯುತ್ತಿದ್ದಾಗಲೇ ದಾಳಿ ಮಾಡಿದ ಘಟನೆ ಗುರುವಾರ ನಡೆದಿದೆ.
ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ( ಶಶಿಕಲಾ) ಬಡಗೇರ ಅಂಗನನಾಡಿ ವರ್ಗಾವಣೆಗೆ ಅಂಗನವಾಡಿ ಸಹಾಯಕಿಯಿಂದ 30 ಸಾವಿರ ಹಣದ‌ ಬೇಡಿಕೆ ಇಟ್ಟಿದ್ದರು.
ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಬೇಡಿಕೆಯಂತೆ 15 ಸಾವಿರ ಲಂಚದ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆ ಬಿದ್ದಿರುವ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಇನ್ಸ್ಪೆಕ್ಟರ್ ಧರ್ಮಟ್ಟಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ದಾಳಿ ಮಾಡ್ತಿದ್ದಂತೆ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಅಸ್ವಸ್ಥತವಾಗಿದ್ದರು. ತಕ್ಷಣವೇ ಕಚೇರಿಗೆ ವೈದ್ಯರನ್ನ ಕರೆಸಿ ಚಿಕಿತ್ಸೆ ಕೊಡಿಸಿದ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ.

Total Views 359
RELATED ARTICLES

Most Popular

Recent Comments

KNN City News
Home
E-Paper