
ಬೆಳಗಾವಿ
ಕಲಬುರ್ಗಿ ಜಿಲ್ಲೆಯಿಂದ ಬಂದು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ ಹರಿದು ಮೂರು ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ಬಳಿ ಭಾನುವಾರ ನಡೆದಿದೆ.
ಪುಣೆ ಬೆಂಗಳೂರು ಹೆದ್ದಾರಿಯಲ್ಲಿ ರಸ್ತೆ ರಿಪೇರಿ ಮಾಡುತ್ತಿದ್ದ ಕಾರ್ಮಿಕರು ಗಮನಿಸದೆ ಏಕಾಏಕಿ ಮೈ ಮೇಲೆ ಹರಿದ ಟ್ಯಾಂಕರ್ ನಿಂದ ಮೂರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು ಓರ್ವನ ಸ್ಥಿತಿ ಗಂಭೀರವಾಗಿ ಗಾಯವಾಗಿದೆ.
ಕಲಬುರಗಿ ಜಿಲ್ಲೆಯ ರಾಮಣ್ಣ, ಮಹೇಶ್, ರಾಮಚಂದ್ರ ಮೃತ ದುರ್ದೈವಿಗಳು. ಲಕ್ಷ್ಮೀಬಾಯಿ, ಅನುಶ್ರೀ, ಭೀಮಾಬಾಯಿ ಗೆ ಗಂಭೀರ ಗಾಯವಾಗಿದೆ. ಕಾರ್ಮಿಕರ ಮೇಲೆ ಹರಿದು ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾದ ಆಯಿಲ್ ತುಂಬಿದ್ದ ಟ್ಯಾಂಕರ್ ನಲ್ಲಿ ಸಿಲುಕಿದ್ದ ಚಾಲಕನನ್ನ ಹೊರ ತೆಗೆದ ಪೊಲೀಸರು. ಗಾಯಗೊಂಡು ಎಲ್ಲರಿಗೂ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
