
ಬೆಳಗಾವಿ
ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಹೊರವಲಯದ ಸಾಗರ ನಗರದಲ್ಲಿ ನಡೆದಿದೆ.
ಯಾಸೀನ ಜಾತಗಾರ (22) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ರೋಹಿತ್ ಜಾಧವ್, ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಶಂಕರ್ ಗುಳೇದ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
