
ಬೆಳಗಾವಿ
ಜಿಲ್ಲೆಯಲ್ಲಿ ಭೀಕರವಾಗಿ ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಗುರುವಾರವೂ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆಯನ್ನು ಘೋಷಿಸಿದ್ದಾರೆ.
ಮಳೆಯ ಪ್ರಮಾಣ ನೋಡಿಕೊಂಡು ಶುಕ್ರವಾರದ ರಜೆ ನಿರ್ಧಾರ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
