
ಬೆಳಗಾವಿ
ರಾಮದುರ್ಗ ತಾಲೂಕಿನ ಮಳ್ಳೂರು ಘಾಟ ರಸ್ತೆಯಲ್ಲಿ ಬೈಕ್ ಹಾಗೂ ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಗೂಡ್ಸ್ ವಾಹನದ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಗುದ್ದಿ ಅಪಘಾತವಾಗಿದೆ. ರಾಮದುರ್ಗ ಪಟ್ಟಣದ ನಿವಾಸಿ ಅರ್ಚಕ ವಿಜಯಕುಮಾರ್ ಘೋಡಬೋಲೆ( 55) ಕಲಬುರಗಿ ಮೂಲದ ಗೂಡ್ಸ್ ವಾಹನದ ಚಾಲಕ ಅನಿಲ್ ಬಿರಾದಾರ( 23) ಮೃತಪಟ್ಟಿದ್ದಾರೆ.ಹಾವೇರಿಯಿಂದ ರಾಮದುರ್ಗಕ್ಕೆ ಬರ್ತಿದ್ದ ಗೂಡ್ಸ್ ವಾಹನ. ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನಕ್ಕೆ ಹೊರಟ್ಟಿದ್ದ ಅರ್ಚಕನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
