
ಬೆಳಗಾವಿ
ಮಗಳ ಮದುವೆಗೆ ಸಾಲ ಮಾಡಿದ್ದ ಆಟೋ ಚಾಲಕನೋರ್ವ ಜಿಲ್ಲಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.
ಕಿರಣ್ ಮನಗುತ್ತಕರ್( 54) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ಎಂದು ತಿಳಿದು ಬಂದಿದೆ. ಕಳೆದ ಒಂದು ವರ್ಷದ ಹಿಂದೆ ಮಗಳ ಮದುವೆ ಮಾಡಿದ್ದ ಕಿರಣ್ ಪ್ರಾಮಾಣಿಕವಾಗಿದ್ದ. ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದ ಕಿರಣ್ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಅಲ್ಲ. ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೂ ನೋವು ತಂದಿದೆ. ಕಳೆದ ಕೆಲ ದಿನಗಳಿಂದ ಕಿರಣ್ ಆಟೋ ನಿಲ್ದಾಣಕ್ಕೆ ಬಂದಿರಲಿಲ್ಲ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವುದು ತಿಳಿಯುತ್ತಿಲ್ಲ ಎಂದು ಆಟೋ ಚಾಲಕ ಬಸವರಾಜ್ ತಿಳಿಸಿದ್ದಾರೆ.
ಸ್ಥಳದಲ್ಲಿ ಜನರು ಸೇರಿದ್ದು ಮಾರ್ಕೆಟ್ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
