Monday, November 23, 2026
HomeBelagaviನಿಯಮ ಉಲ್ಲಂಃಘನೆ ಮಾಡುತ್ತಿರುವ ಖಾಸಗಿ ಮಾರುಕಟ್ಟೆ

ನಿಯಮ ಉಲ್ಲಂಃಘನೆ ಮಾಡುತ್ತಿರುವ ಖಾಸಗಿ ಮಾರುಕಟ್ಟೆ

ಬೆಳಗಾವಿ
ರೈತ ಪರ ಕೆಲಸ ಮಾಡುವಲ್ಲಿ ವಿಫಲವಾಗಿದ್ದ ಕಾರಣಕ್ಕೆ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜೈ ಕಿಸಾನ್ ಖಾಸಗಿ ತರಕಾರಿ ಮಾರುಕಟ್ಟೆಯ ಪರವಾನಿಗೆಯನ್ನು ರಾಜ್ಯ ಕೃಷಿ ಮಾರಾಟ ಇಲಾಖೆ ರದ್ದುಗೊಳಿಸಿ ಆದೇಶ ಮಾಡಿದರೂ ಖಾಸಗಿ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಸಲು ಎಪಿಎಂಸಿ ಕಾರ್ಯದರ್ಶಿ ಕುಮ್ಮಕ್ಕು ನೀಡಿದ್ದಾರೆ ಎಂದು ಖಾಸಗಿ ಮಾರುಕಟ್ಟೆ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆಯ ವ್ಯವಹಾರ ಅಧಿನಿಯಮ 1966ರ ಕಲಂ 72 ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ತತಕ್ಷಣದಿಂದ ರದ್ದಾಗಬೇಕೆಂದು ಜಾರಿಗೆ ಬರುವಂತೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಎಪಿಎಂಸಿ ‌ಕಿರಿಯ ಅಧಿಕಾರಿಗಳು ರಾತ್ರೋರಾತ್ರಿ ಜೈ ಕಿಸಾನ್ ಖಾಸಗಿ ಮಾರುಕಟ್ಟೆಗೆ ಬಂದಿದ್ದ ತರಕಾರಿ ವಾಹನಗಳನ್ನು ಎಪಿಎಂಸಿಗೆ ಸ್ಥಳಾಂತರ ಮಾಡಲು‌ ನೋಡಿದಾಗ ಖಾಸಗಿ ಮಾರುಕಟ್ಟೆಯವರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಬೇದರಿಕೆ ಹಾಕಿದರು. ಹೆಚ್ಚುವರಿ ಪೊಲೀಸ್ ಭದ್ರತೆ ಪಡೆಯಬೇಕಿದ್ದ ಎಪಿಎಂಸಿ ಕಾರ್ಯದರ್ಶಿಯ ನಿರ್ಲಕ್ಷ್ಯ ಮಾಡಿ ಮರಳಿ ತರಕಾರಿ ತುಂಬಿದ ವಾಹನಗಳನ್ನು ಖಾಸಗಿ ಮಾರುಕಟ್ಟೆಗೆ ಒಳಗೆ ಬಿಟ್ಟಿರುವುದು ನಾನಾ ಅನುಮಾನಕ್ಕೆ ಕಾರಣವಾಗಿದೆ.
ಜೈ ಕಿಸಾನ್ ಖಾಸಗಿ ಮಾರುಕಟ್ಟೆಯಲ್ಲಿ ಯಾವುದೇ ವ್ಯಾಪಾರ ವಹಿವಾಟು ನಡೆಸದಂತೆ 1966 (8)ರ ನಿಯಮ ಉಲ್ಲಂಘನೆ ಮಾಡಿರುವ ಖಾಸಗಿ ಮಾರುಕಟ್ಟೆ ಮಂಡಳಿಯ ವಿರುದ್ಧ ಕಾನೂನು ಕ್ರಮ‌ ಜರುಗಿಸಬೇಕಿದ್ದ ಎಪಿಎಂಸಿ ಕಾರ್ಯದರ್ಶಿ ಹಾಗೂ ಎಪಿಎಂಸಿ ಉಪನಿರ್ದೇಶಕ ಜೈ ಕಿಸಾನ್ ಗೆ ಸಹಕಾರ ಮಾಡುತ್ತಿದ್ದಾರೆ ಎಂದು ಖಾಸಗಿ ಮಾರುಕಟ್ಟೆ ಹೋರಾಟಗಾರರು ಆರೋಪಿಸಿದ್ದಾರೆ.

Total Views 51
RELATED ARTICLES

Most Popular

Recent Comments

KNN City News
Home
E-Paper