Monday, November 23, 2026
HomeBelagaviವರದಕ್ಷಿಣೆ ಕಿರುಕುಳಕ್ಕೆ ಮಕ್ಕಳನ್ನು ಕೊಂದು ಆತ್ಮಹತ್ಯೆ ‌ಮಾಡಿಕೊಂಡ ತಾಯಿ

ವರದಕ್ಷಿಣೆ ಕಿರುಕುಳಕ್ಕೆ ಮಕ್ಕಳನ್ನು ಕೊಂದು ಆತ್ಮಹತ್ಯೆ ‌ಮಾಡಿಕೊಂಡ ತಾಯಿ

ತುಮಕೂರು
ವರುದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಮಕ್ಕಳನ್ನು ಕೊಲೆ ಮಾಡಿದ ಬಳಿಕ ತಾಯಿಯೋರ್ವಳು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನ ಪಾವಗಡದಲ್ಲಿ ಸಂಭವಿಸಿದೆ.
ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಪತ್ನಿ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ಇಬ್ಬರು ಮುದ್ದು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿದ್ದಾರೆ.
23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಆತ್ಮಹತ್ಯೆಗೂ ಮುನ್ನ 4 ವರ್ಷದ ಮಗ ಕೌಶಿಕ್ ಹಾಗೂ 2 ವರ್ಷದ ಮಗು ಯುಕ್ತಿಯನ್ನು ಕೊಲೆ ಮಾಡಿದ್ದಾರೆ. ಬಳಿಕ ತಾನು ಮೃತಪಟ್ಟಿದ್ದಾಳೆ.
ಈ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸರಿತಾ ತನ್ನ ಇಬ್ಬರು ಮಕ್ಕಳ ಹತ್ಯೆಗೈದಿದ್ದು, ಬಳಿಕ ತಾನು ನೇಣಿಗೆ ಶರಣಾಗಿದ್ದಾಳೆ.
ಮೂಲತಃ ಕಡಪನಕೆರೆಯ ಸರಿತಾ ತನ್ನದೇ ಊರಿನ ಸಂತೋಷ್ ಜೊತೆ ವಿವಾಹವಾಗಿದ್ದರು. ಕಳೆದ 6 ವರ್ಷಗಳ ಹಿಂದೆ ಸಂತೋಷ್ ಜೊತೆ ವಿವಾಹವಾಗಿತ್ತು. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಸಂತೋಷ್ ಈ ಘಟನೆ ನಡೆದ ವೇಳೆ ಮನೆಯಲ್ಲಿರಲಿಲ್ಲ. ಮದುವೆಯಾದಾಗಿನಿಂದ ಪತಿ ಹಾಗೂ ಆತನ ಕುಟುಂಬದಿಂದ ಸರಿತಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ವರದಕ್ಷಿಣೆ ಕಿರುಕುಳ ನೀಡಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ತಾಯಿ ಸರಿತಾ ನೊಂದು ಮಕ್ಕಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Total Views 48
RELATED ARTICLES

Most Popular

Recent Comments

KNN City News
Home
E-Paper