
ಬೆಳಗಾವಿ
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿರುವ ವೇಳೆ ರಮೇಶ್ ಕತ್ತಿ ಅವರು ನಾಯಕ ಸಮಾಜದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ರಾಜಶೇಖರ ತಳವಾರ ನೀಡಿದ ದೂರಿನಂತೆ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮಾಡಿರುವ ಆರೋಪ ಕೇಳಿ ಬಂದಿದ್ದು, ಸದ್ಯ ನಾಯಕ ಸಮುದಾಯದ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಾಜಿ ಸಂಸದರ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ.
ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಸೇರಿ ನಾಯಕರ ಮುಂದೆ ಬ್ಯಾಡರು ಸೂ.. ಮಕ್ಕಳು ಪೋನ್ ಮಾಡಿ ಹೇಳ್ತಾರೆ ಎಂದು ಅವಾಚ್ಯ ಪದ ಬಳಕೆ ಮಾಡಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುವ ಬಿಕೆ ಮಾಡೆಲ್ ಶಾಲೆ ಆವರಣದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿರುವ ಕುರಿತು ಎಸ್ಟಿ ಸಮಾಜದ ನಾಯಕರು ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಗ್ಗೆ ಗೊತ್ತಾಗಿದೆ.
