
ಅಥಣಿ
ನಾನು ಉಪಮುಖ್ಯಮಂತ್ರಿ, ಸಚಿವನಾಗಿ ಶಾಸಕನಾಗಿ ಜನ ಸೇವೆ ಮಾಡಿದ್ದೇನೆ. ನಾನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಎಲ್ಲಿಯೂ ಹೇಳಿಲ್ಲ. ಆ ಭ್ರಮೆ ನನಗೆ ಇಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ 50 ಕೋಟಿ ಬೆಟ್ಟಿಂಗ್ ಗೆ ಶಾಸಕ ಲಕ್ಷ್ಮಣ ಸವದಿ ಟಾಂಗ್ ನೀಡಿದರು.
ಅಥಣಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷನಾಗುತ್ತೇನೆಂದು ಎಲ್ಲಿ ಕೂಡಾ ಹೇಳಿಲ್ಲ, ನಾನು ಆಕಾಂಕ್ಷಿಯೂ ಅಲ್ಲ. ಸಹಕಾರಿ ರಂಗದಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಅಪೇಕ್ಷ ಬ್ಯಾಂಕಿನ ಅಧ್ಯಕ್ಷನಾಗಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸಿದ್ದೇನೆ ಜೊತೆಗೆ ಸಹಕಾರಿ ಸಚಿವನಾಗಿ ಕೆಲಸವನ್ನು ಮಾಡಿದ್ದೇನೆ, ರಾಜ್ಯದ ಉಪಮುಖ್ಯಮಂತ್ರಿಯಾಗಿ ತೀರುಗಿ ಜಿಲ್ಲಾ ಮಧ್ಯವರ್ತಿ ಬ್ಯಾಂಕಿಗೆ ಅಧ್ಯಕ್ಷನಾಗುವ ಭ್ರಮೆ ನನಗೆ ಇಲ್ಲ ಎಂದರು.
ಅಥಣಿ ಕ್ಷೇತ್ರದ ಜನರು ನನಗೆ ತುಂಬಾ ಎತ್ತರಕ್ಕೆ ಬೆಳೆಸಿದ್ದಾರೆ, ನಾನು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮುಗಿದಿದೆ , ಇನ್ನೂ ನಾಲ್ಕು ಕ್ಷೇತ್ರಗಳ ಫಲಿತಾಂಶ ಬಾಕಿಯಿದೆ ಇದ್ದು, ನ್ಯಾಯಾಲಯದಲ್ಲಿ ಇರುವುದರಿಂದ ಕೋರ್ಟ್ ನಿಂದ ತೀರ್ಪು ಬಂದ ನಂತರ ಘೋಷಣೆಯಾಗುತ್ತದೆ, ನಂತರ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ, ಆ ಸಂದರ್ಭಕ್ಕೆ ಅನುಗುಣವಾಗಿ ಅವತ್ತು ನಾವು ಮಾತನಾಡಬೆಕಾಗುತ್ತದೆ, ರಾಜಕಾರಣ ಯಾವತ್ತೂ ನಿಂತ ನೀರಲ್ಲ, ಹರಿಯುತ್ತಿರುತ್ತದೆ ರಾಜಕಾರಣದಲ್ಲಿ ಶತ್ರುಗಳು ಮಿತ್ರರಾಗುತ್ತಾರೆ ವೈರಿಗಳು ಮಿತ್ರರಾಗುತ್ತಾರೆ ಕಾಲಾನುಸಾರ ಸಂದರ್ಭ ಬಂದಾಗ ಚರ್ಚೆ ಮಾಡುತ್ತೇನೆ ಎಂದರು.
ರಮೇಶ್ ಕತ್ತಿ ಹಾಗೂ ಜಾರಕಿಹೊಳಿ ಪೇನಲ್ ನಿಂದ ಯಾರು ಅಧ್ಯಕ್ಷರಾಗಿರುತ್ತಾರೆ ಎಂಬುದು ಇನ್ನೂ ಕಾದ ನೋಡಬೇಕೆಂದು ಎಂದರು.
ಚುನಾವಣೆ ನಾಲ್ಕೈದು ದಿನಗಳ ಮುಂಚೆ ಅಷ್ಟೇ ಕತ್ತಿ ನಿವು ಜೊತೆಯಾಗಿ ವೇದಿಕೆ ಹಂಚಿಕೊಂಡ ವಿಚಾರವಾಗಿ ಮಾತನಾಡಿ, ಸದ್ಯಕ್ಕೆ ಈ ವಿಚಾರ ಮಾತನಾಡಬೇಡ , ಇವತ್ತು ದೀಪಾವಳಿ ಹಬ್ಬ ಇರುವುದರಿಂದ ಏನು ಮಾತನಾಡುವುದಿಲ್ಲ, ದೇವರು ಎಲ್ಲರಿಗೂ ಒಳ್ಳೇದು ಮಾಡಲಿ ಎಂದರು.
ಡಿಸೆಂಬರನಲ್ಲಿ ನನಗೆ ಶುಕ್ರದೆಸೆ ಪ್ರಾರಂಭವಾಗುತ್ತದೆ ಎಂದು ಹೇಳಿಕೆ ವಿಚಾರವಾಗಿ ಮಾತನಾಡಿ , ಡಿಸೆಂಬರ್ ನಲ್ಲಿ ನನಗೆ ಶುಕ್ರದೆಸೆ ಪ್ರಾರಂಭವಾಗುತ್ತದೆ, ಯಾವ ರೀತಿ ಅಂತ ಹೇಳುವುದಿಲ್ಲ, ಆ ಗೊಂದಲ ಎಲ್ಲರಿಗೆ ಹಾಗೆ ಇರಬೇಕು , ಅದು ಉದಯ ಆದ ಮೇಲೆ ಎಲ್ಲರಿಗೂ ಗೊತ್ತಾಗುತ್ತದೆ, ಸಚಿವ ಸ್ಥಾನ ಅಥವಾ ಡಿಸಿಎಂ ಎಂಬುವುದು ಹೇಳುವುದಕ್ಕೆ ಬರುವುದಿಲ್ಲ ಅದಕ್ಕೆ ಯಾವುದು ಅರ್ಥವೂ ಕೂಡ ಉಳಿಯಲ್ಲ, ಸಂದರ್ಭ ಬಂದಾಗ ನಿಮಗೆ ಎಲ್ಲ ಗೊತ್ತಾಗುತ್ತದೆ, ಡಿಸೆಂಬರ್ ತಿಂಗಳ ಕಳೆದ ಬಳಿಕ 2026 ಬರುತ್ತದೆ ಎಲ್ಲರಿಗೂ ಒಳ್ಳೆಯದಾಗುತ್ತದೆ, ರಾಜ್ಯಕ್ಕೆ ದೇಶಕ್ಕೆ ಶುಕ್ರದೆಸೆ ಪ್ರಾರಂಭವಾಗುತ್ತದೆ ಮುಂದೆ ಒಳ್ಳೆಯದಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.
