
ಬೆಳಗಾವಿ
ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟಮೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯಲ್ಲಿ ನಡೆದಿದೆ.
ಬೆಳಗಾವಿಯಿಂದ ಬೈಲಹೊಂಗಲ ಕಡೆ ಹೋಗುತ್ತಿದ್ದ ವೇಳೆ ನಡೆದ ಅಫಘಾತ ಸಂಭವಿಸಿದೆ. ಕಾರಿನಲ್ಲಿ ಬೈಲಹೊಂಗಲದ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅಥಿಕ (24) ವರ್ಷದ ಯುವಕ ಮೃತಪಟ್ಟಿರುವುದು ತಿಳಿದು ಬಂದಿದೆ. ಕಾರಿನಲ್ಲಿದ್ದ ಇಬ್ಬರು ಜಿಗಿದು ಪ್ರಾಣ ಉಳಿಸಿಕೊಂಡಿದ್ದರೇ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
