
ಕಲಬುರಗಿ
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಮೃತಪಟ್ಟ ಘಟನೆ ಸೋಮವಾರ ಕಲಬುರಗಿ ಜಿಲ್ಲೆಯ ಜೀವರ್ಗಿಯಲ್ಲಿ ನಡೆದಿದೆ.
ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ.
ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.
ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
