
ಬೆಳಗಾವಿ
ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ಮೇಲೆ ಸರಕಾರ ಕ್ರಮ ಕೈಗೊಳ್ಳದೆ ಇದ್ದರೇ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು
ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ವಾಲ್ಮೀಕಿ ಸಮಾಜಕ್ಕೆ ಮಾಡಿರುವ ಅನ್ಯಾಯದ ಕುರಿತು ಚಳಿಗಾಲದ ಅಧಿವೇಶನದ ವೇಳೆ ಸರಕಾರದ ಗಮನಕ್ಕೆ ತರಲಾಗುವುದು.
ಕೇವಲ ವಾಲ್ಮೀಕಿ ಸಮಾಜ ಮಾತ್ರವಲ್ಲ. ಹಿಂದುಳಿದ ಹಾಗೂ ಎಸ್ಸಿ, ಎಸ್ಟಿ ಸಮಾಜದ ನಕಲಿ ದಾಖಲೆ ಸೃಷ್ಟಿಸಿ ಅಹಿಂದ ಜನಾಂಗಕ್ಕೆ ಅನ್ಯಾಯವಾಗುತ್ತಿದೆ. ವಿಶೇಷವಾಗಿ ನಾವು ಜನತಾ ನ್ಯಾಯಾಲಯಕ್ಕೆ ಹೋಗಲು ನಿರ್ಧರಿಸಿದ್ದೇವೆ ಎಂದರು.
ಹುಕ್ಕೇರಿ ಗ್ರೇಡ್- 2 ತಹಶಿಲ್ದಾರ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯ ಸರಕಾರ ಕೇವಲ ವಕೀಲರ ಮೂಲಕ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ನಾಯಕರಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಅನ್ಯಾಯ ಮಾಡಿದ ನಮ್ಮ ಸಮಾಜಕ್ಕೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದರು.
ಹುಕ್ಕೇರಿ ಗ್ರೇಡ್ -2 ತಹಶಿಲ್ದಾರ ಮೇಲೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಮತ್ತೊಂದು ಬಾರಿ ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದೇವೆ. ಅಲ್ಲದೆ, ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೇ ವಿಪಕ್ಷ ನಾಯಕ ಆರ್. ಅಶೋಕ ಗಮನಕ್ಕೆ ತಂದು ಡಿ.8 ರಿಂದ ಸದನದ ಒಳಗೆ ಹಾಗೂ ಡಿ.19 ರಂದು ಸದನದ ಹೊರಗೆ ಹೋರಾಟ ನಡೆಸಲಾಗುವುದು ಎಚ್ಚರಿಸಿದರು.
ಅಹಿಂದ ಸಮಾಜದಕ್ಕೆ ಅನ್ಯಾಯವಾಗಿದೆ. ಅಹಿಂದ ನಾಯಕ ಎಂದು ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ನಮ್ಮ ಸಮಾಜಕ್ಕೆ ಅನ್ಯಾಯವಾವುದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದರು.
ದೆಹಲಿಗೆ ಕಳುಹಿಸಿದ್ದು ವಿಜಯೇಂದ್ರ. ಅವರ ಆದೇಶದಂತೆ ನಾವು ದೆಹಲಿಗೆ ಹೋಗಿದ್ದೇವು ಎಂದು ಅವರೇ ಹೇಳಿದ್ದಾರೆ ಎಂದು ಲೇವಡಿ ಮಾಡಿದ ಅವರು, ಬಿಜೆಪಿಯಲ್ಲಿ ಎಷ್ಟೇ ಜಗಳ ಬಂದರೂ ಪಕ್ಷದ ಚೌಕಟ್ಟು ಬಂದಾಗ ನಾವೆಲ್ಲರೂ ಒಂದೇ ಇರುತ್ತೇವೆ ಎಂದರು.
ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯ ಬಂದಾಗ ಎಲ್ಲ ಶಾಸಕ, ಸಚಿವರು ಒಂದಾಗಿ ಧ್ವನಿ ಎತ್ತುತ್ತೇವೆ. ಅಧಿವೇಶನದಲ್ಲಿ ಚರ್ಚೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.
