Monday, November 23, 2026
HomeBelagaviಗೋವಾದ ಅಕ್ರಮ ಮದ್ಯ ಜಪ್ತು ಮಾಡಿದ ಅಬಕಾರಿ ಪೊಲೀಸರು

ಗೋವಾದ ಅಕ್ರಮ ಮದ್ಯ ಜಪ್ತು ಮಾಡಿದ ಅಬಕಾರಿ ಪೊಲೀಸರು

ಬೆಳಗಾವಿ
ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದ ಬಳಿಯ ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ಅಬಕಾರಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬೆಳಗಾವಿ ವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು, ಸಿಪಿಐ ಮಂಜುನಾಥ ಮೆಳ್ಳಿಗೇರಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಕಳ್ಳ ಮಾರ್ಗದ ಮೂಲಕ ಗೋವಾ ರಾಜ್ಯದಿಂದ ಮದ್ಯವನ್ನು ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ದೊರೆತ ಹಿನ್ನೆಲೆ ತಕ್ಷಣವೇ ವಾಹನವನ್ನು ತಡೆದು ಪರಿಶೀಲನೆ ನಡೆಸಲಾಗಿದೆ.
ಪರಿಶೀಲನೆಯ ವೇಳೆ ಸುಮಾರು 3 ಲಕ್ಷ 12 ಸಾವಿರ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ 205 ಲೀಟರ್ ಗೋವಾ ಮದ್ಯ ಹಾಗೂ 25 ಲೀಟರ್ ಓರಾಕ್ ಮದ್ಯ ಸೇರಿವೆ ಎಂದು ತಿಳಿದುಬಂದಿದೆ.
ಪೊಲೀಸರು ದಾಳಿ ನಡೆಸುತ್ತಿದ್ದಂತೆ ಆರೋಪಿಯು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಕಾರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ.
ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Total Views 68
RELATED ARTICLES

Most Popular

Recent Comments

KNN City News
Home
E-Paper