Monday, November 23, 2026
HomeBelagaviಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ಶಾಸಕ ಅಭಯಗೆ ಸುಪ್ರಿಂ ಕೋಟ್೯ ನೋಟಿಸ್

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ಶಾಸಕ ಅಭಯಗೆ ಸುಪ್ರಿಂ ಕೋಟ್೯ ನೋಟಿಸ್

ದೆಹಲಿ
ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ್ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಸಂಪಾದನೆಯ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಾಮಾಜಿಕ ಕಾರ್ಯಕರ್ತ ಸುಜಿತ್ ಮುಳಗುಂದ್ ದಾಖಲಿಸಿದ್ದ ಈ ಪ್ರಕರಣವು ಇದೀಗ ಸುಪ್ರೀಂ ಕೋರ್ಟ್‌ನ ಗಮನಕ್ಕೆ ಬಂದಿದೆ. ವಿಚಾರಣೆಯ ವೇಳೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ವಕೀಲ ನಿತಿನ್ ಬೋಳಬಂದಿ ನ್ಯಾಯಾಲಯದ ಮುಂದೆ ವಾದ ಮಂಡಿಸಿದರು.
ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿ, ಉತ್ತರ ಸಲ್ಲಿಸಲು ಅವಧಿ ನೀಡಿದೆ.


ಪ್ರಕರಣದ ಹಿನ್ನೆಲೆ:
ಈ ಪ್ರಕರಣದ ಮೂಲ 2012ರಲ್ಲಿ ಸಲ್ಲಿಸಲಾದ ದೂರಿಗೆ ಸೇರಿದ್ದು, ಶಾಸಕ ಅಭಯ ಪಾಟೀಲ್ ತಮ್ಮ ಆದಾಯಕ್ಕೆ ಮೀರಿದ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ದೂರಿನ ಆಧಾರದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದರು.
ನಂತರ ಪ್ರಕರಣ ಕರ್ನಾಟಕ ಹೈಕೋರ್ಟ್‌ಗೆ ತಲುಪಿದ್ದು, ತನಿಖೆಗೆ ಸಂಬಂಧಿಸಿದ ಕ್ರಮಗಳನ್ನು ಪ್ರಶ್ನಿಸಲಾಗಿತ್ತು. ಹೈಕೋರ್ಟ್ ಆದೇಶವನ್ನು ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.
ಇದೀಗ ಸುಪ್ರೀಂ ಕೋರ್ಟ್ ಹಸ್ತಕ್ಷೇಪದೊಂದಿಗೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆರೋಪಗಳು ದೇಶದ ಉನ್ನತ ನ್ಯಾಯಾಂಗದ ನೇರ ಪರಿಶೀಲನೆಗೆ ಒಳಪಟ್ಟಿವೆ.
ಪ್ರಕರಣದ ಮುಂದಿನ ವಿಚಾರಣೆ ಕೆಲ ವಾರಗಳಲ್ಲಿ ನಡೆಯುವ ಸಾಧ್ಯತೆ ಇದೆ.

Total Views 132
RELATED ARTICLES

Most Popular

Recent Comments

KNN City News
Home
E-Paper