
ಬೆಳಗಾವಿ
ನಗರದಲ್ಲಿ ಸೈಬರ್ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಉದ್ಯಮಬಾಗದ ಸುರೇಶ ಮುರ್ವೆ ಎಂಬವರನ್ನು ಗುರಿಯಾಗಿಸಿಕೊಂಡು ಲಕ್ಷಾಂತರ ರೂಪಾಯಿ ದೋಚಿದ ಘಟನೆ ಬೆಳಕಿಗೆ ಬಂದಿದೆ.
ರಾಷ್ಟ್ರೀಕೃತ ಬ್ಯಾಂಕ್ ಹೆಸರಿನಲ್ಲಿ ಅಪರಿಚಿತರಿಂದ ಕಳುಹಿಸಲಾದ ಎಪಿಕೆ ಫೈಲ್ ಅನ್ನು ಬ್ಯಾಂಕ್ ಸಂಬಂಧಿತ ಮಹತ್ವದ ದಾಖಲೆ ಎಂದು ಭಾವಿಸಿ ಸುರೇಶ ಮುರ್ವೆ ಅವರು ತಮ್ಮ ಮೊಬೈಲ್ನಲ್ಲಿ ಕ್ಲಿಕ್ ಮಾಡಿದ್ದಾರೆ. ಫೈಲ್ ಓಪನ್ ಮಾಡಿದ ಕೆಲವೇ ಕ್ಷಣಗಳಲ್ಲಿ ಮೊಬೈಲ್ ನಿಯಂತ್ರಣ ಕಳ್ಳರ ಕೈಗೆ ಸಿಕ್ಕಿದ್ದು, ಬಳಿಕ ಅವರ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 4.28 ಲಕ್ಷ ರೂ. ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ.
ಘಟನೆ ಗಮನಕ್ಕೆ ಬಂದ ತಕ್ಷಣವೇ ನಗರ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸೈಬರ್ ಕಳ್ಳರು ಯಾವ ಮಾರ್ಗದಲ್ಲಿ ಖಾತೆ ವಿವರಗಳನ್ನು ಪಡೆದುಕೊಂಡರು ಎಂಬುದರ ಕುರಿತು ತಾಂತ್ರಿಕ ವಿಶ್ಲೇಷಣೆ ನಡೆಯುತ್ತಿದೆ.ಇತ್ತೀಚಿನ ದಿನಗಳಲ್ಲಿ ಬ್ಯಾಂಕ್, ಕೂರಿಯರ್, ಸರ್ಕಾರಿ ಇಲಾಖೆಗಳ ಹೆಸರಿನಲ್ಲಿ ಎಪಿಕೆ ಫೈಲ್ಗಳು ಅಥವಾ ಅನುಮಾನಾಸ್ಪದ ಲಿಂಕ್ಗಳನ್ನು ಕಳುಹಿಸುವ ಮೂಲಕ ಜನರನ್ನು ಮೋಸಗೊಳಿಸುವ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಇಂಥ ಫೈಲ್ಗಳನ್ನು ಡೌನ್ಲೋಡ್ ಅಥವಾ ಓಪನ್ ಮಾಡಬಾರದು ಎಂದು ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
