
ಬೆಳಗಾವಿ
ಅನುಮತಿ ಪಡೆಯದೆಯೇ ಅಕ್ರಮವಾಗಿ ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದಲ್ಲಿ ಅಕ್ರಮವಾಗಿ ಮೈನಿಂಗ್ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಎಂಟು ಮಂದಿಯ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅನುಮತಿ ಇಲ್ಲದೆ ಮಣ್ಣು, ಖನಿಜ ಸಂಪತ್ತನ್ನು ತೆಗೆಯುತ್ತಿರುವುದು ಪತ್ತೆಯಾಗಿದ್ದು, ತಕ್ಷಣವೇ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಭರಮಣ್ಣ ಪಾಟೀಲ್, ಭೀಮಗೌಡ ಪಾಟೀಲ್, ಪ್ರಲ್ಹಾದ ಪಾಟೀಲ್, ಸುಭಾಷ ದಾವರಾ, ನಾರಾಯಣ ಪಾಟೀಲ್, ವೀರ ಪಾಟೀಲ್ ಹಾಗೂ ಅಕ್ಷಯ ಪಾಟೀಲ್ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಆರೋಪಿಗಳಾಗಿ ಗುರುತಿಸಲಾಗಿದೆ. ಉಳಿದ ಆರೋಪಿಗಳ ವಿವರಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯವೂ ಮುಂದುವರಿದಿದೆ.
ಅಕ್ರಮ ಮೈನಿಂಗ್ ಚಟುವಟಿಕೆಗಳು ಪರಿಸರಕ್ಕೆ ಹಾಗೂ ಸರ್ಕಾರದ ಆದಾಯಕ್ಕೆ ಹಾನಿ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ, ಈ ರೀತಿಯ ಕಾನೂನುಬಾಹಿರ ಕಾರ್ಯಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಪ್ರಕರಣದ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಅಕ್ರಮ ಮೈನಿಂಗ್ಗೆ ಬಳಸಲಾಗಿದ್ದ ಯಂತ್ರೋಪಕರಣಗಳು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಸಂಬಂಧಪಟ್ಟ ಇಲಾಖೆಗಳ ಸಹಯೋಗದೊಂದಿಗೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.
