Thursday, November 19, 2026
HomeBelagaviಪ್ರೀಯಕರನೊಂದಿಗೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಪತ್ನಿ

ಪ್ರೀಯಕರನೊಂದಿಗೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಪತ್ನಿ

ಬೆಳಗಾವಿ
ಪ್ರಿಯಕರನೊಂದಿಗೆ ಓಡಿ ಹೋಗಲು ಪತಿಯ ಮನೆಗೆ ಕನ್ನ ಹಾಕಿದ್ದ ಪಾಪಿ ಪತ್ನಿ, ಪ್ರಿಯಕರನನ್ನು ಬಂಧಿಸಿದ ಘಟನೆ
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.
ಹೊಸಕೋಟಿ ಗ್ರಾಮದ ಶರೀಫ್ ಎಂಬುವರ ಮನೆಯಲ್ಲಿ ಸುಮಾರು 21 ಲಕ್ಷ ರೂ. ಮೌಲ್ಯದ 154.6 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ರೂ. ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ ಕಳ್ಳತನವಾಗಿತ್ತು. ಈ ಕುರಿತು ದಿಲಶಾನ್ ನದಾಫ್ ಕಟಕೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಮದುರ್ಗ ಪೊಲೀಸರು ಕೇವಲ 48 ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಹಣಮಂತ ಮಾರಾಪೂರ ಹಾಗೂ ಹಸೀನಾ ನದಾಫ್ ಎಂದು ಗುರುತಿಸಲಾಗಿದೆ.
ಮೂಲತಃ ಮೂಡಲಗಿ ತಾಲೂಕಿನ ನಿವಾಸಿಯಾಗಿರುವ ಹಸೀನಾ ನದಾಫ್ ಕಳೆದ ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಜೊತೆ ವಿವಾಹವಾಗಿದ್ದಳು. ಆದರೆ ಮದುವೆಯಾದ ಬಳಿಕವೂ ತನ್ನ ಪ್ರೀಯಕರ ಹಣಮಂತನ ಸಂಪರ್ಕದಲ್ಲಿದ್ದಳು. ಬಳಿಕ ಇಬ್ಬರೂ ಸೇರಿ ಶರೀಫ್ ಮನೆಯಲ್ಲಿ ಕಳ್ಳತನ ನಡೆಸಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ರಾಮದುರ್ಗ ಸಿಪಿಐ ವಿನಾಯಕ ಬಡಿಗೇರ ಹಾಗೂ ಪಿಎಸ್‌ಐ ಬಸವರಾಜ್ ಕೊಣ್ಣೂರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಪ್ರಕರಣವನ್ನು ಶೀಘ್ರವಾಗಿ ಭೇದಿಸಿದ ರಾಮದುರ್ಗ ಪೊಲೀಸರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Total Views 204
RELATED ARTICLES

Most Popular

Recent Comments

KNN City News
Home
E-Paper