Thursday, November 19, 2026
HomeBelagaviಶಿವಂ ಅಸೋಸಿಯೇಟ್ಸ್ ಕಚೇರಿ ಮೇಲೆ ದಾಳಿ‌ ಮಾಡಿದ್ದು ಇದೇ ಕಾರಣಕ್ಕೆ

ಶಿವಂ ಅಸೋಸಿಯೇಟ್ಸ್ ಕಚೇರಿ ಮೇಲೆ ದಾಳಿ‌ ಮಾಡಿದ್ದು ಇದೇ ಕಾರಣಕ್ಕೆ

ಬೆಳಗಾವಿ
ಸಾರ್ವಜನಿಕರಿಂದ ವಿವಿಧ ಯೋಜನೆಗಳ ಹೆಸರಿನಲ್ಲಿ ಹಣ ಸಂಗ್ರಹ ಮಾಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆ ಬೆಳಗಾವಿ ಜಿಲ್ಲಾಡಳಿತವು ಕರ್ನಾಟಕ ಠೇವಣಿದಾರರ ಹಿತಾಸಕ್ತಿ ರಕ್ಷಣಾ ಕಾಯ್ದೆ ಅಡಿಯಲ್ಲಿ ತನಿಖೆಗೆ ಆದೇಶ ಹೊರಡಿಸಿ ಶಿವಂ ಅಸೋಸಿಯೇಟ್ಸ್ ಕಚೇರಿ ಮೇಲೆ ದಾಳಿ ನಡೆಸಲಿ ತನಿಖೆ ನಡೆಸಲು ಆದೇಶಿಸಿದೆ.


ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಬೆಳಗಾವಿ ಉಪ ವಿಭಾಗಾಧಿಕಾರಿಗೆ ಸಮಗ್ರ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಆದೇಶದಲ್ಲಿ ಕರ್ನಾಟಕ ಠೇವಣಿದಾರರ ಹಿತಾಸಕ್ತಿ ರಕ್ಷಣಾ ಕಾಯ್ದೆ, 2004ರ ಸೆಕ್ಷನ್ 3(1), 3(2) ಮತ್ತು 4ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಸಾರ್ವಜನಿಕರಿಗೆ ಹೆಚ್ಚು ಲಾಭದ ಭರವಸೆ ನೀಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಮುದ್ರಣ, ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೀಡಿರುವುದು ಅಧಿಕಾರಿಗಳ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮೇ.13 ರಂದು ಪೊಲೀಸ್ ಇಲಾಖೆಯಿಂದ ಸಲ್ಲಿಸಲಾದ ವರದಿಯಲ್ಲೂ ಆರ್ಥಿಕ ಅಕ್ರಮಗಳಿಗೆ ಸಂಬಂಧಿಸಿದ ಅಂಶಗಳು ಉಲ್ಲೇಖಿಸಿ ಜಿಲ್ಲಾಡಳಿತ ತನಿಖೆ ಆರಂಭಿಸಿದೆ.


ಸಹಾಯಕ ಆಯುಕ್ತರಿಗೆ ಠೇವಣಿ ಯೋಜನೆಗಳು, ಹಣಕಾಸು ವ್ಯವಹಾರಗಳು, ಬ್ಯಾಂಕ್ ಖಾತೆಗಳು, ಆಸ್ತಿಗಳು, ಒಪ್ಪಂದಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ತನಿಖಾಧಿಕಾರಿಗಳಿಗೆ ಶೋಧ ನಡೆಸುವುದು, ದಾಖಲೆ ಜಪ್ತಿ, ಬ್ಯಾಂಕ್ ಖಾತೆ ಫ್ರೀಜ್ ಹಾಗೂ ಅಗತ್ಯವಿದ್ದಲ್ಲಿ ಆಸ್ತಿ ಜಪ್ತಿ ಮಾಡುವ ಅಧಿಕಾರ ನೀಡಲಾಗಿದೆ. ತನಿಖೆಗೆ ಪೊಲೀಸ್ ಹಾಗೂ ತಾಂತ್ರಿಕ ಸಹಾಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರಿಗೆ “ಖಚಿತ ಲಾಭ”ದ ಭರವಸೆ ನೀಡಲಾಗಿದೆಯೇ, ಠೇವಣಿದಾರರಿಗೆ ಹಣ ಮರಳಿ ನೀಡಲಾಗಿದೆಯೇ ಹಾಗೂ ಚಟುವಟಿಕೆಗಳು ಸಾರ್ವಜನಿಕರ ಹಿತಾಸಕ್ತಿಗೆ ಹಾನಿಕಾರಕವಾಗಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ.
ಈ ಕುರಿತು 24 ಗಂಟೆಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದ್ದು, ಮುಂದಿನ ಕ್ರಮಗಳಿಗೆ ಶಿಫಾರಸು ನೀಡುವಂತೆ ಜಿಲ್ಲಾಡಳಿತ ಆದೇಶಿಸಿದೆ. ಪೊಲೀಸ್ ಸೇರಿದಂತೆ ಸಂಬಂಧಿತ ಎಲ್ಲಾ ಇಲಾಖೆಗಳು ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಸೂಚನೆ ನೀಡಲಾಗಿದೆ.

Total Views 339
RELATED ARTICLES

Most Popular

Recent Comments

KNN City News
Home
E-Paper