Monday, November 23, 2026
HomeBelagaviನೀಲಣ್ಣವರಗೆ 14 ದಿನ ನ್ಯಾಯಾಂಗ ಬಂಧನ

ನೀಲಣ್ಣವರಗೆ 14 ದಿನ ನ್ಯಾಯಾಂಗ ಬಂಧನ

ಬೆಳಗಾವಿ
ಬಹುಚರ್ಚಿತ 4,500 ಕೋಟಿ ರೂ. ವಂಚನೆ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ್ ಅವರನ್ನು ಸಿಐಡಿ ಅಧಿಕಾರಿಗಳು ಬುಧವಾರ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ಮನವಿಯನ್ನು ಪರಿಗಣಿಸಿದ ನ್ಯಾಯಾಧೀಶ ಗಂಗಾಧರ್ ಕೆ. ಅವರು ನೀಲಣ್ಣವರ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಸಿಐಡಿ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ವಿಚಾರಣೆ ವೇಳೆ ತನಗೆ ಎದೆನೋವು ಸೇರಿದಂತೆ ಆರೋಗ್ಯ ಸಮಸ್ಯೆಗಳಿದ್ದು, ಸೂಕ್ತ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ನೀಲಣ್ಣವರ್ ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರು ಪರಿಶೀಲಿಸಿ ಅಗತ್ಯ ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿಸಿದರು.
“ಬಿಮ್ಸ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಲಭ್ಯವಿದೆ. ಅಗತ್ಯವಿದ್ದರೆ ಕಿಮ್ಸ್ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯಬಹುದು. ಹೆಚ್ಚಿನ ಚಿಕಿತ್ಸೆ ಬೇಕಿದ್ದರೆ ವಕೀಲರ ಮೂಲಕ ಅರ್ಜಿ ಸಲ್ಲಿಸಿ. ಜೈಲಿನಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೂ ಅಧಿಕಾರಿಗಳು ಚಿಕಿತ್ಸೆ ಒದಗಿಸುತ್ತಾರೆ, ಎಂದು ನ್ಯಾಯಾಧೀಶರು ಹೇಳಿದರು.
ಇದೇ ವೇಳೆ, ಪ್ರಕರಣ ಇನ್ನೂ ತನಿಖಾ ಹಂತದಲ್ಲಿದ್ದು, ತನಿಖಾಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುವಂತೆ ನ್ಯಾಯಾಲಯ ನೀಲಣ್ಣವರ್‌ಗೆ ಸೂಚಿಸಿತು.
ನ್ಯಾಯಾಂಗ ಬಂಧನ ಆದೇಶ ಹೊರಬಿದ್ದ ಬಳಿಕ ಶಿವಾನಂದ ನೀಲಣ್ಣವರ್ ಅವರನ್ನು ಕೆಲವೇ ಹೊತ್ತಿನಲ್ಲಿ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದರು.

Total Views 150
RELATED ARTICLES

Most Popular

Recent Comments

KNN City News
Home
E-Paper