Monday, November 23, 2026
HomeBelagaviಅಪ್ರಾಪ್ತೆಯ ಖಾಸಗಿ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ವಿರುದ್ಧ ಕೇಸ್

ಅಪ್ರಾಪ್ತೆಯ ಖಾಸಗಿ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ವಿರುದ್ಧ ಕೇಸ್

ಬೆಳಗಾವಿ
ಅಪ್ರಾಪ್ತರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ನಗರದ ಶ್ರೀನಾಥ ಪಾಟೀಲ ವಿರುದ್ಧ ಸೋಮವಾರ ದೂರು ದಾಖಲಾಗಿದೆ.
ಆರೋಪಿ 2024ರ ಡಿಸೆಂಬರ್ 15ರಂದು ಇನ್‌ಸ್ಟಾಗ್ರಾಮ್ ಮೆಸೆಂಜರ್ ಮೂಲಕ ಅಪ್ರಾಪ್ತರ ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ವಿಷಯವನ್ನು ಕೇಂದ್ರ ಸರ್ಕಾರದ ಇಂಡಿಯನ್ ಸೈಬರ್ ಕ್ರೈಂ ಕೋ-ಆರ್ಡಿನೇಷನ್ ಸೆಂಟರ್ (I4C) ಗಂಭೀರವಾಗಿ ಪರಿಗಣಿಸಿ, ಸಂಬಂಧಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ನಗರ ಸೈಬರ್ ಕ್ರೈಂ ವಿಭಾಗದ ಹವಾಲ್ದಾರ್ ಗಂಗಾಧರ ಅವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ವಿರುದ್ಧ ತನಿಖೆ ಆರಂಭಿಸಿದ್ದಾರೆ.
ಅಪ್ರಾಪ್ತರಿಗೆ ಸಂಬಂಧಿಸಿದ ಅಶ್ಲೀಲ ಚಿತ್ರಗಳು, ವಿಡಿಯೋಗಳು ಅಥವಾ ಇತರೆ ಅಸಭ್ಯ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಗಂಭೀರ ಅಪರಾಧವಾಗಿದ್ದು, ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Total Views 26
RELATED ARTICLES

Most Popular

Recent Comments

KNN City News
Home
E-Paper