Monday, November 23, 2026
HomeBelagaviಅಪ್ರಾಪ್ತರ ಖಾಸಗಿ ವಿಡಿಯೋ ಅಪ್‌ಲೋಡ್: ಕೇಸ್ ದಾಖಲು

ಅಪ್ರಾಪ್ತರ ಖಾಸಗಿ ವಿಡಿಯೋ ಅಪ್‌ಲೋಡ್: ಕೇಸ್ ದಾಖಲು

ಬೆಳಗಾವಿ
ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ರಾಪ್ತರ ಖಾಸಗಿ ವಿಡಿಯೋ ಅಪ್‌ಲೋಡ್ ಮಾಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಸೈಬರ್ ಅಪರಾಧ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಶ್ರವಣಬಿ18 ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.
ಕಳೆದ ಡಿ.28ರಂದು ಶ್ರವಣಬಿ18 ಖಾತೆಯಲ್ಲಿ ಅಪ್ರಾಪ್ತರಿಗೆ ಸಂಬಂಧಿಸಿದ ಖಾಸಗಿ ವಿಡಿಯೋವೊಂದು ಅಪ್‌ಲೋಡ್ ಆಗಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಹೆಚ್ಚಾಗುತ್ತಿದ್ದಂತೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಸೈಬರ್ ಅಪರಾಧ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸದ್ಯ ಖಾತೆಯ ಮಾಲೀಕರ ಗುರುತು ಪತ್ತೆಹಚ್ಚಲು ತಾಂತ್ರಿಕ ತನಿಖೆ ಕೈಗೊಳ್ಳಲಾಗಿದ್ದು, ಇನ್‌ಸ್ಟಾಗ್ರಾಮ್ ಖಾತೆಯ ಐಪಿ ವಿಳಾಸ ಹಾಗೂ ಇತರೆ ಡಿಜಿಟಲ್ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣಗಳ ದುರುಪಯೋಗ, ವಿಶೇಷವಾಗಿ ಅಪ್ರಾಪ್ತರ ಗೌಪ್ಯತೆಗೆ ಧಕ್ಕೆ ತರುವಂತಹ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

Total Views 116
RELATED ARTICLES

Most Popular

Recent Comments

KNN City News
Home
E-Paper