Thursday, November 19, 2026
HomeHubli-Dharwadಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನ: ಬೃಹತ್ ಪ್ರತಿಭಟನೆ

ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನ: ಬೃಹತ್ ಪ್ರತಿಭಟನೆ

 

ಹುಬ್ಬಳ್ಳಿ. ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ರಾಜ್ಯ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಹುಬ್ಬಳ್ಳಿಯ ಪ್ರಧಾನ ಅಂಚೆ ಕಚೇರಿ ಬಳಿಯ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮಿನಿ ವಿಧಾನಸೌಧದವರೆಗೆ ಬೃಹತ್ ಹಕ್ಕೊತ್ತಾಯ ಮೆರವಣಿಗೆ ನಡೆಸಲಾಯಿತು.

ಮೆರವಣಿಗೆ ಮೂಲಕ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಪ್ರತಿಭಟನಾಕಾರರು ಕೆಲಹೊತ್ತು ರಸ್ತೆ ತಡೆ

ನಡೆಸಿದರು. ಈ ವೇಳೆ ಮಾತನಾಡಿದ ಸುಧಾ ದೊರೆರಾಜ್ , ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಂಪುಟದಲ್ಲಿ ಹುಬ್ಬಳ್ಳಿ ಪೂರ್ವ ವಿಧಾನ ಸಭಾ ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆದ್ದಿರುವ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಪ್ರಸಾದ್ ಅಬ್ಬಯ್ಯ ತಮ್ಮ ಕ್ಷೇತ್ರದಲ್ಲಿ ಎಲ್ಲ ಸಮಾಜ, ಸಮುದಾಯಗಳ ಜನರ ಸೇವೆಯನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಇದೆ ವೇಳೆ ಹೇಳಿದರು ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತು ಇತರರು ಭಾಗವಹಿಸಿದ್ದರು

Total Views 18
RELATED ARTICLES

Most Popular

Recent Comments

KNN City News
Home
E-Paper