Monday, November 23, 2026
HomeBelagaviಅಮಿತ್ ಶಾ ಭೇಟಿಗೆ ತೆರಳಿದ ಪುಂಡ ಎಂಇಎಸ್ ಗೆ ಶಾಕ್

ಅಮಿತ್ ಶಾ ಭೇಟಿಗೆ ತೆರಳಿದ ಪುಂಡ ಎಂಇಎಸ್ ಗೆ ಶಾಕ್

ಬೆಳಗಾವಿ
ಕೊಲ್ಲಾಪುರಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಲು ತೆರಳಿದ್ದ ಪುಂಡ ಎಂಇಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಕರ್ನಾಟಕ ಪೊಲೀಸರು ಶನಿವಾರ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ತಡೆದು ಶಾಕ್ ನೀಡಿದ್ದಾರೆ.
ಬೆಳಗಾವಿ ಸೇರಿದಂತೆ ಗಡಿ ಭಾಗದಲ್ಲಿ ಮರಾಠಿ ಭಾಷಿಕರ ಹಕ್ಕುಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು, ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಲು ಎಂಇಎಸ್ ಮುಖಂಡರು ಕೊಲ್ಲಾಪುರದತ್ತ ತೆರಳುತ್ತಿದ್ದರು. ಈ ವಿಚಾರ ಮುಂಚಿತವಾಗಿ ತಿಳಿದಿದ್ದ ಪೊಲೀಸ್ ಇಲಾಖೆ, ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಹತ್ತರಗಿ ಟೋಲ್ ಗೇಟ್ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಿತ್ತು.
ಎಂಇಎಸ್ ಮುಖಂಡರ ವಾಹನಗಳ ಸರತಿ ಟೋಲ್ ಗೇಟ್ ತಲುಪುತ್ತಿದ್ದಂತೆಯೇ ಪೊಲೀಸರು ವಾಹನಗಳನ್ನು ತಡೆದು ಮುಂದೆ ಸಾಗದಂತೆ ಸೂಚಿಸಿದರು. ಈ ವೇಳೆ ತೀವ್ರ ಆಕ್ರೋಶಗೊಂಡ ಕಾರ್ಯಕರ್ತರು ಪೊಲೀಸರ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಎಂಇಎಸ್ ಮುಖಂಡರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
“ಬೆಳಗಾವಿಯಲ್ಲಿ ಮರಾಠಿ ಭಾಷಿಕರಿಗೆ ನಿರಂತರ ಅನ್ಯಾಯವಾಗುತ್ತಿದೆ. ನಮ್ಮ ಸಮಸ್ಯೆಗಳನ್ನು ಕೇಂದ್ರ ಗೃಹ ಸಚಿವರ ಗಮನಕ್ಕೆ ತರಲು ಹೊರಟಿದ್ದೇವೆ. ಆದರೆ ನಮ್ಮ ಪ್ರಜಾಪ್ರಭುತ್ವ ಹಕ್ಕನ್ನೇ ರಾಜ್ಯ ಸರ್ಕಾರ ಕಸಿದುಕೊಳ್ಳುತ್ತಿದೆ” ಎಂದು ಎಂಇಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಕರ್ನಾಟಕ ಸರ್ಕಾರ ಉದ್ದೇಶಪೂರ್ವಕವಾಗಿ ತಮ್ಮ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಪುಂಡಾಟ ನಡೆಸಿದರು.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ತಡೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Total Views 132
RELATED ARTICLES

Most Popular

Recent Comments

KNN City News
Home
E-Paper